Karnataka Revenue Department Recruitment 2024: ಕರ್ನಾಟಕವೂ ಸೇರಿದಂತೆ ದೇಶದಲ್ಲಿ ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಖಾಸಗಿ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶ ಲಭ್ಯವಿದ್ದರೂ ಕೋಟ್ಯಂತರ ಜನರು ಸರ್ಕಾರಿ ಕೆಲಸಕ್ಕಾಗಿ ಅಲೆಯುವಂತಾಗಿದೆ. ಸರ್ಕಾರ ಹೊರಡಿಸುವ ಕೆಲವೇ ಕೆಲವು ಹುದ್ದೆಗಳ ನೇಮಕಾತಿಗೆ ಲಕ್ಷಾಂತರ ಜನರು ಅರ್ಜಿ ಸಲ್ಲಿಸುವಂತಾಗಿದೆ. ಉನ್ನತ ಶಿಕ್ಷಣ ಪಡೆದ ಅಭ್ಯರ್ಥಿಗಳೇ SSLC ವಿದ್ಯಾರ್ಹತೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ.    


COMMERCIAL BREAK
SCROLL TO CONTINUE READING

ಇದನ್ನೂ ಓದಿ: ವೈದ್ಯರ ಮುಷ್ಕರ: ಗಡಿಜಿಲ್ಲೆ ಆಸ್ಪತ್ರೆಗಳಲ್ಲಿ ರೋಗಿಗಳ ಪರದಾಟ, ಚಿಕಿತ್ಸೆ ಸಿಗದೇ ವಾಪಾಸ್!!


ಇತ್ತೀಚೆಗೆ ಕಂದಾಯ ಇಲಾಖೆಯಿಂದ ಕರೆಯಲಾಗಿದ್ದ 1,000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಬರೋಬ್ಬರಿ 5,70,982 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದ ಸೇರಿ ಒಟ್ಟು 1,000 ಹುದ್ದೆಗಳಿಗೆ ನೇರ ನೇಮಕಾತಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿತ್ತು.


ಕೇವಲ ಸಾವಿರ ಹುದ್ದೆಗಳಿಗೆ 5 ಲಕ್ಷಕ್ಕೂ ಅಧಿಕ ಅರ್ಜಿಗಳು ಬಂದಿವೆ. ಅರ್ಜಿ ಸಲ್ಲಿಕೆ ಅವಧಿ ಈಗಾಗಲೇ ಮುಕ್ತಾಯಗೊಂಡಿದ್ದು, ಈ ಹುದ್ದೆಗಳಿಗೆ ನೇಮಕವಾಗಲು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾಭ್ಯಾಸವನ್ನು ನಿಗದಿಪಡಿಸಲಾಗಿತ್ತು. 


ಇದನ್ನೂ ಓದಿ: ರಾಜ್ಯಪಾಲರು ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವಕ್ಕೆ ಮಾರಕವಾದ ಪತ್ರ ಕಳುಹಿಸಿದ್ದಾರೆ: ಡಿಕೆಶಿ


ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮೊದಲ ಹಂತದ ಪರೀಕ್ಷೆ ಸೆಪ್ಟೆಂಬರ್ 29 ಹಾಗೂ ದ್ವಿತೀಯ ಹಂತದ ಪರೀಕ್ಷೆ ಅಕ್ಟೋಬರ್ 27ರಂದು ಎಲ್ಲಾ ಜಿಲ್ಲೆಗಳಲ್ಲೂ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.