ಬೆಂಗಳೂರು:  ಸೆ.14: 2023-24 ನೇ ಸಾಲಿನ ಮೆಟ್ರಿಕ್ ನಂತರದ ವೃತ್ತಿಪರ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿ ಕಲ್ಪಿಸಲು ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: "ಯಡಿಯೂರಪ್ಪ ಅವರೇ ನಿಮಗೆ ಮೋಸ ಮಾಡಿದ ಕುಮಾರಸ್ವಾಮಿ ಅವರನ್ನು ಮತ್ತೆ ಹೇಗೆ ಸೇರಿಸಿಕೊಳ್ಳುತ್ತಿದ್ದೀರಿ"


ವಿದ್ಯಾರ್ಥಿಗಳು https://shp.karnataka.gov.in ಆನ್‍ಲೈನ್ ಮೂಲಕ ಅರ್ಜಿಯನ್ನು ಅಕ್ಟೋಬರ್ 11 ರೊಳಗಾಗಿ ಸಲ್ಲಿಸಬೇಕು.ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ನ್ನು ನೋಡಬಹುದು.


ಇದನ್ನೂ ಓದಿ- ಪುಷ್ಪ ಸಿನಿಮಾದಂತೆ ರಕ್ತ ಚಂದನ ಸಾಗಿಸುತ್ತಿದ್ದ ಖದೀಮರ ಬಂಧನ


ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಇ-ಮೇಲ್ ಮುಂಖಾತರ ಅಥವಾ ಜಿಲ್ಲೆ, ತಾಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಾಯವಾಣಿ ಸಂಖ್ಯೆ: 8050770005 ಸಂಪರ್ಕಿಸಬಹುದೆಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.