ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2021ನೇ ಸಾಲಿನ ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಳಿಗಾಗಿ ಅರ್ಹ ಕ್ರೀಡಾಪಟುಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.


ಇದನ್ನೂ ಓದಿ: Singapore Open 2022: ಫೈನಲ್‌ಗೆ ಲಗ್ಗೆಯಿಟ್ಟ ಪಿ.ವಿ ಸಿಂಧು


ಅದರಂತೆ, 2021ನೇ ಸಾಲಿನ ಹಿರಿಯ ಕ್ರೀಡಾಪಟು/ ತರಬೇತುದಾರರಾಗಿ ಸಾಧನೆ ಮಾಡಿರುವ ಕರ್ನಾಟಕ ಹಿರಿಯ ಕ್ರೀಡಾಪಟುಗಳು/ ತರಬೇತುದಾರರುಗಳಿಂದ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಸೇವಾಸಿಂಧು ವೆಬ್‌ಸೈಟ್  https://sevasindhu.karnataka.gov.in ಮೂಲಕ ಆಗಸ್ಟ್ 10ರ ಒಳಗಾಗಿ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಬಹುದು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.