ಬೆಂಗಳೂರು: NMMS ಪರೀಕ್ಷೆಯನ್ನು 2024ನೇ ಡಿಸೆಂಬರ್‌ 8ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆಎಸ್‌ಕ್ಯುಎಎಸಿ ವತಿಯಿಂದ ನಡೆಸಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

NMMS ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿ ವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.


ಸದರಿ ಪರೀಕ್ಷೆಯ ಆನ್‌ಲೈನ್ ಅರ್ಜಿಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ https://kseab.karnataka.gov.in/  ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ವಿದ್ಯಾರ್ಥಿಗಳ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ NMMS ಲಾಗಿನ್‌ನಲ್ಲಿ ಸಲ್ಲಿಸುವುದು. ಆನ್‌ಲೈನ್ ಅರ್ಜಿ ಸಲ್ಲಿಸಲು 2024ನೇ ಸೆಪ್ಟೆಂಬರ್ 5   ಕೊನೆಯ ದಿನಾಂಕವಾಗಿರುತ್ತದೆ.


ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಸುತ್ತೋಲೆಯನ್ನು ಗಮನಿಸುವುದು ಹಾಗೂ ಕೆಎಸ್‌ಕ್ಯುಎಎಸಿ ಕಚೇರಿಯ ದೂರವಾಣಿ ಸಂಖ್ಯೆ 080-23341615 ಅನ್ನು ಸಂಪರ್ಕಿಸಬಹುದು.


ಇದನ್ನೂ ಓದಿ: ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಖಾಸಗಿ ಬಸ್ ಪಲ್ಟಿ: 16ಕ್ಕೂ ಹೆಚ್ಚು ಜನರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.