ಧಾರವಾಡ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯನ್ನು 2023-24ನೇ ಸಾಲಿಗೆ ಮುಂದುವರೆದಿದ್ದು, ಈ ಯೋಜನೆಯಡಿ ನಗರ ಹಾಗೂ ಗ್ರಾಮಾಂತರ ಪ್ರದೇಶದ ನಿರುದ್ಯೋಗ ಯುವಕ, ಯುವತಿಯರಿಗೆ ಕೈಗಾರಿಕೆ, ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು ಉತ್ಪಾದನೆ ವಲಯಕ್ಕೆ ರೂ.50 ಲಕ್ಷಗಳವರೆಗೆ ಮತ್ತು ಸೇವಾ ವಲಯಕ್ಕೆ ರೂ.20 ಲಕ್ಷಗಳವರೆಗೆ ಸಾಲ ಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಶಾದಿ.ಕಾಮ್ ನಲ್ಲಿ ಪರಿಚಯ,  ಓಯೋದಲ್ಲಿ ಮಜಾ: ಕೊನೆಗೆ ಯುವತಿಗೆ ಕೈಕೊಟ್ಟು ಬೇರೆ ನಿಖಾ ಆದ ಐನಾತಿ!


ಈ ಸೌಲಭ್ಯವು ಹೊಸದಾಗಿ ಪ್ರಾರಂಭಿಸುವ ಚಟುವಟಿಕೆಗಳಿಗೆ ಮಾತ್ರ ಅವಕಾಶ ಇರುತ್ತದೆ. ಈ ಬಗ್ಗೆ ಧಾರವಾಡ ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಂದ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‍ಸೈಟ್ www.kviconline.gov.in/pmegpeportal ವೆಬ್‍ಸೈಟ್‍ನಲ್ಲಿ ತಿಳಿಸಿದ ಮಾರ್ಗಸೂಚಿಯಂತೆ ಅರ್ಜಿಯನ್ನು ಆನ್‍ಲೈನ್‍ನಲ್ಲಿ ಸಲ್ಲಿಸಿ ದಾಖಲಾತಿಗಳೊಂದಿಗೆ ಕಚೇರಿಗೆ ಸಂಪರ್ಕಿಸಬಹುದು.


ಇದನ್ನೂ ಓದಿ: Actor Found Dead: ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟನ ಮೃತದೇಹ ಪತ್ತೆ..!


ಹೆಚ್ಚಿನ ವಿವರಗಳಿಗಾಗಿ ಕಚೇರಿ ದೂರವಾಣಿ ಸಂಖ್ಯೆ:0836-2322627, ಕೈಗಾರಿಕಾ ವಿಸ್ತರಣಾಧಿಕಾರಿ, ಹುಬ್ಬಳ್ಳಿ, ಕುಂದಗೋಳ, ನವಲಗುಂದ ಹಾಗೂ ಅಣ್ಣಿಗೇರಿ ಇವರ ಮೊಬೈಲ ಸಂಖ್ಯೆ 9902412428 ಮತ್ತು ಕೈಗಾರಿಕಾ ವಿಸ್ತರಣಾಧಿಕಾರಿ, ಧಾರವಾಡ, ಕಲಘಟಗಿ ಹಾಗೂ ಅಳ್ನಾವರ ಇವರ ಮೊಬೈಲ ಸಂಖ್ಯೆ 9886251096 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.