ಕೊಪ್ಪಳ:  ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವರಿಂದ ಸ್ವಯಂ ಉದ್ಯೋಗ ಪ್ರಾರಂಭಿಸಲು ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ-HD Kumaraswamy Health Updates: ಎಚ್​​ಡಿಕೆ ಆರೋಗ್ಯದ ಬಗ್ಗೆ ಅನಿತಾ ಕುಮಾರಸ್ವಾಮಿ​ ಹೇಳಿದ್ದೇನು..?


ಈ ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಉದ್ಯಮಶೀಲತೆ, ಉದ್ಯಮ ಪ್ರಾರಂಭದ ಹಂತಗಳು, ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಯೋಜನೆಗಳು, ಸಾಲ ಸೌಲಭ್ಯಗಳು, ಬ್ಯಾಂಕ್ ಬಗ್ಗೆ, ಜಾಹಿರಾತು ಮತ್ತು ಮಾರುಕಟ್ಟೆಯ ಕುರಿತು, ನೋಂದಣೆ ಮಾಡುವ ವಿಧಾನಗಳು, ಯಶಸ್ವಿ ಉದ್ಯಮಿಗಳ ಜೊತೆ ಸಂವಾದ, ಉದ್ಯಮ ನಿರ್ವಹಣೆ ಮಾಡುವ ವಿಧಾನಗಳು ಮತ್ತು ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು.


ಇದನ್ನೂ ಓದಿ-ಹಸಿರು ಚಹಾ ಅಷ್ಟೇ ಅಲ್ಲ, ಈ ಹಸಿರು ಕಾಫಿ ಕೂಡ ತೂಕ ಇಳಿಕೆಗೆ ಪರಿಣಾಮಕಾರಿ ಮನೆಮದ್ದು!


ಅಭ್ಯರ್ಥಿಗಳು 18 ವರ್ಷ ದಿಂದ 40 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು, ಬರೆಯಲು ಬರುತ್ತಿರಬೇಕು. ಮಹಿಳೆಯರಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ಸೆಪ್ಟೆಂಬರ್ 08ರ ಒಳಗಾಗಿ ಅರ್ಜಿಯನ್ನು ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕೊಪ್ಪಳ ಆವರಣ, ನಗರಸಭೆ ಎದುರುಗಡೆ, ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಥವಾ ಮೊಬೈಲ್ ಮುಖಾಂತರ ತಮ್ಮ ಹೆಸರುವನ್ನು ನೋಂದಾಯಿಸಿಕೊಳ್ಳಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ 6362557332 ಅಥವಾ 6362681190 ಈ ನಂಬರಿಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಸಿಡಾಕ್ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.