Post Office Recruitment 2024: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 9 ನುರಿತ ಕುಶಲಕರ್ಮಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ... 


COMMERCIAL BREAK
SCROLL TO CONTINUE READING

ವಿದ್ಯಾರ್ಹತೆ: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 8ನೇ ತರಗತಿ ಪಾಸಾಗಿರಬೇಕು.


ಇದನ್ನೂ ಓದಿ: Daily GK Quiz: ಯಾವ ಗ್ರಹವನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ?


ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 1, 2024ಕ್ಕೆ ಕನಿಷ್ಠ 18 ವರ್ಷ ಮತ್ತು 30 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ: OBC(NCL) ಅಭ್ಯರ್ಥಿಗಳಿಗೆ 3 ವರ್ಷ & SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ. 


ವೇತನ: ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹19,900 ಸಂಬಳ ನೀಡಲಾಗುತ್ತದೆ.


ಉದ್ಯೋಗದ ಸ್ಥಳ: ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಹಾರಾಷ್ಟ್ರದ ಮುಂಬೈನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಅರ್ಜಿ ಶುಲ್ಕ: SC/ST/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಇನ್ನುಳಿದ ಎಲ್ಲಾ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.


ಆಯ್ಕೆ ಪ್ರಕ್ರಿಯೆ: ಡ್ರೈವಿಂಗ್ ಲೈಸೆನ್ಸ್​, ಟ್ರೇಡ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 


ಇದನ್ನೂ ಓದಿ: ರಾಹುಲ್‌ ಗಾಂಧಿ ಜೊತೆ ಡೇಟಿಂಗ್‌ ಮಾಡುವ ಮನಸ್ಸಾಗಿದೆ: ನಟಿ ಕರೀನಾ ಕಪೂರ್‌ ಸೆನ್ಸೇಷನಲ್‌ ಹೇಳಿಕೆ


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಸೀನಿಯರ್ ಮ್ಯಾನೇಜರ್, ಮೇಲ್ ಮೋಟಾರ್ ಸೇವೆ, 134-A, ಸುದಮ್ ಕಲು ಅಹಿರೆ ಮಾರ್ಗ, ವರ್ಲಿ, ಮುಂಬೈ-400018 ಈ ವಿಳಾಸಕ್ಕೆ ಕಳುಹಿಸಬೇಕು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.