ಚಾಮರಾಜನಗರ:   ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ನಡೆಸಲಾಗುತ್ತಿರುವ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಆಯಾ ರಾಜ್ಯಗಳಿಗೆ ಈ ಪರೀಕ್ಷೆಗಳನ್ನು ನಡೆಸಲು ಅಧಿಕಾರ ನೀಡಬೇಕು ಎಂದು ಒತ್ತಾಯಿಸಿ  ಕನ್ನಡಪರ ಹೋರಾಟಗಾರರು (Pro Kannada Activists) ನಗರದ ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮೀ ಅವರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.


COMMERCIAL BREAK
SCROLL TO CONTINUE READING

ಈ ಹಿಂದೆ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸುತ್ತಿದ್ದ ಪರೀಕ್ಷೆಗಳು ಆಯಾ ರಾಜ್ಯ ಸಂಬಂಧಪಟ್ಟದ್ದಾಗಿದ್ದವು. ಕಳೆದ ದಶಕದಿಂದ ಕೇಂದ್ರ ಸರ್ಕಾರವು (Central Govt) ನೀಟ್ ಎಂಬ ಹೆಸರಿನಲ್ಲಿ ವೈದ್ಯಕೀಯ ಶಿಕ್ಷಣ ಪರೀಕ್ಷೆಗಳನ್ನು ದೇಶಾದ್ಯಂತ ನಡೆಸುತ್ತಿರುವುದು ಸರಿಯಷ್ಟೆ ಆದರೆ ಈ ಸಾರಿಯ ನೀಟ್ ಪರೀಕ್ಷೆಯಲ್ಲಿ ಬಾರಿ ತಾಂತ್ರಿಕ ದೋಷವಾಗಿ ಲಕ್ಷಾಂತರ ಅರ್ಹ ವಿದ್ಯಾರ್ಥಿಗಳು ಈ ವೈದ್ಯಕೀಯ ಶಿಕ್ಷಣ ಪ್ರವೇಶದಿಂದ ವಂಚಿತರಾಗಿದ್ದಾರೆ ಎಂದು ದೂರಿದ್ದಾರೆ.


ಇದನ್ನೂ ಓದಿ- ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ, ವದಂತಿಗಳು ಸುಳ್ಳು : NTA ಸ್ಪಷ್ಟನೆ


ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ  (Corruption in NEET exam) ನಡೆದಿರುವ ಶಂಕೆ ಇದೆ. ಇದು ಇದೇ ರೀತಿ ಮುಂದುವರೆದರೆ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಬಹಳ ತೊಂದರೆಯಾಗಲಿದೆ. ಅವರು ಶಾಶ್ವತವಾಗಿ ಈ ವೈದ್ಯಕೀಯ ಶಿಕ್ಷಣ ಪ್ರವೇಶದಿಂದ ಹೊರಗುಳಿಯಲಿದ್ದಾರೆ ಎಂದು ಕನ್ನಡಪರ ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ. 


ಈಗಾಗಲೇ ಈ ನೀಟ್ ಪರೀಕ್ಷೆಯನ್ನು ಕರ್ನಾಟಕ, ತಮಿಳುನಾಡು ರಾಜ್ಯವು ಸೇರಿದಂತೆ ಹಲವಾರು ರಾಜ್ಯಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.ಆದ್ದರಿಂದ ರಾಷ್ಟ್ರಪತಿಗಳಾದ ತಾವು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಈ ರಾಷ್ಟ್ರಮಟ್ಟದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಈ ಪರೀಕ್ಷೆಗಳನ್ನು ನಡೆಸಲು ಆಯಾ ರಾಜ್ಯಗಳಿಗೆ ಅಧಿಕಾರ ನೀಡಬೇಕು ಇದಕ್ಕೆ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಬೇಕು ಸಲ್ಲಿಸಿರುವ ಮನವಿಯಲ್ಲಿ ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ ಒತ್ತಾಯಿಸಿದ್ದಾರೆ.


ಇದನ್ನೂ ಓದಿ- Free Medical Course College: ಈ ಮೆಡಿಕಲ್ ಕಾಲೇಜಿನಲ್ಲಿ ಫ್ರೀ ಆಗಿ ಸಿಗುತ್ತೆ ವೈದ್ಯಕೀಯ ಕೋರ್ಸ್, ಇಲ್ಲಿದೆ ಮಾಹಿತಿ


ಈ ಸಂದರ್ಭದಲ್ಲಿ ನಿಜಧ್ವನಿಗೋವಿಂದರಾಜು, ಪಣ್ಯದಹುಂಡಿ ರಾಜು, ಮಹೇಶ್ ಗೌಡ, ಗು.ಪುರುಷೋತ್ತಮ,  ಚಾ.ರಾ.ಕುಮಾರ್, ನಂಜುಂಡಶೆಟ್ಟಿ, ರಾಜಪ್ಪ, ಲಿಂಗರಾಜು ಇತರರು ಹಾಜರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.