PSI exam postponed: 402 PSI ಹುದ್ದೆಗಳ ನೇಮಕಾತಿ ಪರೀಕ್ಷೆ ಮುಂದೂಡಿಕೆ

PSI exam postponed: ಲೋಕಸಭಾ ಚುನಾವಣೆ ಹಿನ್ನೆಲೆ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಸಹಿಷ್ಣುತೆ ಪರೀಕ್ಷೆ ಹಾಗೂ ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ಲಿಖಿತ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ. 

Written by - Puttaraj K Alur | Last Updated : Mar 27, 2024, 10:26 PM IST
  • ಲೋಕಸಭಾ ಚುನಾವಣೆ ಹಿನ್ನೆಲೆ 402 PSI ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ
  • ಮೇ 8ರಂದು ನಿಗದಿಯಾಗಿದ್ದ ನೇಮಕಾತಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ
  • 2021ನೇ ಸಾಲಿನಲ್ಲಿ 402 PSI ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು
PSI exam postponed: 402 PSI ಹುದ್ದೆಗಳ ನೇಮಕಾತಿ ಪರೀಕ್ಷೆ ಮುಂದೂಡಿಕೆ title=
PSI ನೇಮಕಾತಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ 402 PSI ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಮೇ 8ರಂದು ನಿಗದಿಯಾಗಿದ್ದ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆದೇಶ ಹೊರಡಿಸಿದೆ. 

ಶೀಘ್ರದಲ್ಲೇ ಮುಂದಿನ ದಿನಾಂಕವನ್ನು ಪ್ರಾಧಿಕಾರದ ವೆಬ್​ಸೈಟ್​ನಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ. 2021ನೇ ಸಾಲಿನಲ್ಲಿ 402 PSI ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಮೇ 8ರಂದು ಲಿಖಿತ ಪರೀಕ್ಷೆ ನಡೆಸಲು ದಿನಾಂಕವನ್ನು ನಿಗದಿ ಮಾಡಲಾಗಿತ್ತು. 

ಇದನ್ನೂ ಓದಿ: General Knowledge: ಇಂಗ್ಲಿಷ್‌ನಲ್ಲಿ ರೊಟ್ಟಿಗೆ ಏನೆಂದು ಕರೆಯುತ್ತಾರೆ ಗೊತ್ತಾ?

ಈ ವೇಳಾಪಟ್ಟಿಗೆ ಯಾವುದೇ ಆಕ್ಷೇಪಣೆ ಹಾಗೂ ಆಡಳಿತಾತ್ಮಕ ಸಮಸ್ಯೆಗಳು ಎದುರಾಗದಿದ್ದಲ್ಲಿ ಇದೇ ದಿನಾಂಕದಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಲೋಕಸಭಾ ಚುನಾವಣೆ ಹಿನ್ನೆಲೆ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಸಹಿಷ್ಣುತೆ ಪರೀಕ್ಷೆ ಹಾಗೂ ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ಲಿಖಿತ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ. 

ಒಟ್ಟು ಎರಡು ರೀತಿಯ ಪ್ರಶ್ನೆ ಪತ್ರಿಕೆಗಳು ಇರಲಿವೆ. ಮೊದಲ ಪತ್ರಿಕೆ ಪ್ರಬಂಧ, ಸಾರಂಶ, ಭಾಷಾಂತರ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. 2ನೇ ಪತ್ರಿಕೆಯು ವಸ್ತುನಿಷ್ಟ ಮಾದರಿಯದಾಗಿದ್ದು, ಬಹುವಿಧ ಆಯ್ಕೆ ಉತ್ತರಗಳ ಲಿಖಿತ ಪರೀಕ್ಷೆ ಇರುತ್ತದೆ. ಎರಡೂ ಪ್ರಶ್ನೆ ಪತ್ರಿಕೆಗಳು ಕನ್ನಡ ಮತ್ತು ಇಂಗ್ಲಿಷ್​ನಲ್ಲಿ ಇರುತ್ತದೆ. 

ಇದನ್ನೂ ಓದಿ: UPSCಯಿಂದ ಖಾಲಿ ಇರುವ 147 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News