ಬೆಂಗಳೂರು : ಪಿಎಸ್ಐ ಪರೀಕ್ಷಾ ನೇಮಕಾತಿ ಅಕ್ರಮ ಎಸಗಿರುವ ಆರೋಪದಡಿ ‌ಬಂಧಿತರಾಗಿರುವ ಐಪಿಎಸ್ ಅಧಿಕಾರಿ ಅಮ್ರಿತ್ ಪೌಲ್ ಬುಧವಾರ ಕಸ್ಟಡಿ ಅಂತ್ಯ ಹಿನ್ನೆಲೆ ಇಂದು ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಹಾಜರುಪಡಿಸಿ ಮತ್ತೆ ಮೂರು ದಿನಗಳವರೆಗೆ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಬ್ಬಂದಿ ಮೂಲಕ ಅಭ್ಯರ್ಥಿಗಳೊಂದಿಗೆ ಕೋಟ್ಯಾಂತರ ರೂಪಾಯಿ ಪಡೆದ ಆರೋಪ ಹಿನ್ನೆಲೆ ಎಡಿಜಿಪಿ ದರ್ಜೆ ಅಧಿಕಾರಿಯನ್ನ ಜುಲೈ 4ರಂದು ಸಿಐಡಿ ಬಂಧಿಸಿ   ಪೊಲೀಸ್ ಕಸ್ಟಡಿಯಲ್ಲಿ ಇಟ್ಟಿತ್ತು. ವಿಚಾರಣೆ ವೇಳೆ ಪೌಲ್ ನಾನೇನು ತಪ್ಪು ಮಾಡಿಲ್ಲ.. ನಡೆದಿರುವ ಅವ್ಯವಹಾರ ನನ್ನ ಗಮನಕ್ಕೆ ಬಂದಿಲ್ಲ ಎಂದು ತನಿಖಾಧಿಕಾರಿಗಳ‌ ಮುಂದೆ ಹೇಳಿಕೆ ನೀಡಿದ್ದರು. ಜೊತೆಗೆ ನೇಮಕಾತಿ ವಿಭಾಗದಲ್ಲಿ ಕೆಲಸ‌ ಮಾಡುತ್ತಿದ್ದ ಡಿವೈಎಸ್ಪಿ  ಶಾಂತಕುಮಾರ್, ಸಿಬ್ಬಂದಿ ಶ್ರೀಧರ್, ಹರ್ಷ, ಶ್ರೀನಿವಾಸ್ ಅವರನ್ನು ಬಾಡಿ ವಾರೆಂಟ್ ಮೇರೆಗೆ ಕಸ್ಟಡಿಗೆ ಪಡೆದುಕೊಂಡು ಪರಸ್ಪರ ವಿಚಾರಣೆಗೊಳಪಡಿಸಿದ್ದರು. 


ಇದನ್ನೂ ಓದಿ : Jaggesh : 'ಲಾಂಛನ ತಿರುಚಿದ್ದಾರೆ ಎಂಬ ಆರೋಪ : ಅಲ್ಲಿ ಘರ್ಜಿಸುತ್ತಿರುವ ಆ ಸಿಂಹವೆ ಮೋದಿ'


ಕಸ್ಟಡಿ ಅವಧಿ ಮುಕ್ತಾಯ ಹಿನ್ನೆಲೆ ಅಮ್ರಿತ್ ಪೌಲ್ ರನ್ನು ಮೂರು ದಿನಗಳ ಕಾಲ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ.‌ ಪ್ರತಿದಿನ 30 ನಿಮಿಷ ಕುಟುಂಬದ ಸದ್ಯಸರ ಭೇಟಿ, ಆನ್ ಲೈನ್ ಮುಖಾಂತರ ವೈದ್ಯರನ್ನು ಸಂಪರ್ಕಿಸಲು 1ನೇ ಎಸಿಎಂಎಂ ಕೋರ್ಟ್ ಅನುಮತಿ ನೀಡಿದೆ. ಇನ್ನೂ ಡಿವೈಎಸ್ಪಿ ಶಾಂತಕುಮಾರ್ ಸೇರಿ ನಾಲ್ವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ‌ ಒಪ್ಪಿಸಲಾಗಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ