5 & 8 ನೇ ತರಗತಿಗೆ ಪಬ್ಲಿಕ್ ಪರೀಕ್ಷೆ.! ಸರ್ಕಾರದ ಮಹತ್ವ ನಿರ್ಧಾರ ಏನು?
ಎಂಟನೇ ತರಗತಿವರೆಗೆ ಮಕ್ಕಳನ್ನು ಅನುತ್ತೀರ್ಣ ಮಾಡುವಂತಿಲ್ಲ ಎಂದು ಆರ್‌ಟಿಐ (ಶಿಕ್ಷಣ ಹಕ್ಕು ಕಾಯಿದೆ) ನಿಯಮವಿದೆ.
ಬೆಂಗಳೂರು : ಎಂಟನೇ ತರಗತಿವರೆಗೆ ಮಕ್ಕಳನ್ನು ಅನುತ್ತೀರ್ಣ ಮಾಡುವಂತಿಲ್ಲ ಎಂದು ಆರ್‌ಟಿಐ (ಶಿಕ್ಷಣ ಹಕ್ಕು ಕಾಯಿದೆ) ನಿಯಮವಿದೆ. 9 ನೇ ತರಗತಿಯಲ್ಲಿ ಮಾತ್ರ ಫೇಲ್ ಮಾಡಬಹುದು. ಆದರೆ, ಈ ಬಾರಿ 5 ನೇ ಮತ್ತು 8 ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ವಿಚಾರವಾಗಿ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಚರ್ಚಿಸಲು ಅಕ್ಟೋಬರ್ 12 ರಂದು ಶಿಕ್ಷಣ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ.
5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಂತಿಸಿದೆ. ಎರಡು ವರ್ಷಗಳ ಹಿಂದೆ ಪಬ್ಲಿಕ್ ಪರೀಕ್ಷೆ ಬಗ್ಗೆ ಚರ್ಚೆಗೆ ಬಂದಿತ್ತು. ಆದರೆ ಆಗ ಈ ವಿಚಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಅದೇ ಕಾರಣಕ್ಕೆ ಪಬ್ಲಿಕ್ ಪರೀಕ್ಷೆಯ ಬದಲಾಗಿ ಮೌಲ್ಯಾಂಕನ ಪರೀಕ್ಷೆ ನಡೆಸಲಾಗಿತ್ತು. ಆದರೆ ಇದೀಗ ಮತ್ತೆ ಪಬ್ಲಿಕ್ ಪರೀಕ್ಷೆಯ ವಿಚಾರ ಮುನ್ನೆಲೆಗೆ ಬಂದಿದೆ.
ಇದನ್ನೂ ಓದಿ : Bangalore : ಬಾಲಕಿ ಮೇಲೆ ಗ್ಯಾಂಗ್ ರೇಪ್ ಆರೋಪ, ನಾಲ್ವರು ಪೊಲೀಸ್ ವಶಕ್ಕೆ
9 ನೇ ತರಗತಿವರೆಗೆ ಅನುತ್ತೀರ್ಣ ಮಾಡುವಂತಿಲ್ಲ ಎಂಬ ಆರ್‌ಟಿಐ ಕಾರಣಕ್ಕಾಗಿ ವಿದ್ಯಾರ್ಥಿಗಳು ಕಲಿಕೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂಬ ಆತಂಕ ವ್ಯಕ್ತವಾಗುತ್ತಿದೆ. ಯಾವುದೇ ಚಿಂತೆಯಿಲ್ಲದೇ ಪಾಸ್ ಆಗುತ್ತಿರುವುದು ಮಕ್ಕಳ ಕಲಿಕಾ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತಿದೆ. ಇದೇ ಕಾರಣಕ್ಕೆ ಸರ್ಕಾರ ಈಗ 5 & 8 ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಬಗ್ಗೆ ಚಿಂತಿಸುತ್ತಿದೆ.
2004 -05 ರವರೆಗೂ ಕರ್ನಾಟಕದಲ್ಲಿ 7 ನೇ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿತ್ತು. ಇದರ ಮೌಲ್ಯ ಮಾಪನದ ಆಧಾರದ ಮೇಲೆಯೇ 8 ನೇ ತರಗತಿಗೆ ಪ್ರವೇಶ ನೀಡಲಾಗುತ್ತಿತ್ತು. ಆದರೆ, ಅನುತ್ತೀರ್ಣರಾದ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸುತ್ತಿದ್ದರು. ಈ ಬಗ್ಗೆ ಅನೇಕರು ವಿರೋಧ ಸೂಚಿಸಿದರು. ಮಕ್ಕಳ ಶಿಕ್ಷಣ ಅರ್ಧಕ್ಕೆ ಕೊನೆಯಾಗ ಬಾರದೆಂಬ ಉದ್ದೇಶದಿಂದ 7 ನೇ ತರಗತಿಯ ಪಬ್ಲಿಕ್ ಪರೀಕ್ಷೆಯನ್ನು ತೆಗೆದು ಹಾಕಲಾಯಿತು. ಇದೀಗ ಅಕ್ಟೋಬರ್ 12 ರಂದು ಶಿಕ್ಷಣ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದ್ದು, 5 & 8 ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬಗ್ಗೆ ಯಾವ ತೀರ್ಮಾನ ಹೊರಬರಲಿದೆ ಕಾದು ನೋಡಬೇಕು.
ಇದನ್ನೂ ಓದಿ : Chanukya Niti : ನಿಮ್ಮ ಪತ್ನಿ ಕಿರುಚಾಡಿದ್ರೆ ಕೋಪ ಬರುತ್ತಾ? ಹೆಂಡತಿಯ ಈ ಕೂಗಾಟ ಮಂಗಳಕರವಂತೆ.!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ