​RITES Recruitment 2023: RITES (Rail India Technical and Economic Service) ನಲ್ಲಿ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇದಕ್ಕಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ತಕ್ಷಣ ಅರ್ಜಿ ಸಲ್ಲಿಸಬೇಕು. ಸಹಾಯಕ ಇಂಜಿನಿಯರ್ ಸೇರಿದಂತೆ ಹಲವು ಹುದ್ದೆಗಳು ಖಾಲಿ ಇದ್ದು, ವೇತನ 2 ಲಕ್ಷಕ್ಕೂ ಹೆಚ್ಚು ಇರುತ್ತದೆ.


COMMERCIAL BREAK
SCROLL TO CONTINUE READING

ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವೀಸಸ್‌ನಿಂದ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅದರ ಪ್ರಕಾರ ಸಂಸ್ಥೆಯಲ್ಲಿ ಹಲವು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು. 


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 


ಅಧಿಕೃತ https://www.rites.com/Career ಗೆ ಭೇಟಿ ನೀಡುವ ಮೂಲಕ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05 ಜುಲೈ 2023 ಎಂದು ನಿಗದಿಪಡಿಸಲಾಗಿದೆ.


ಇದನ್ನೂ ಓದಿ: PUC ಬಳಿಕ ಈ ಕೋರ್ಸ್‌ ಮಾಡಿ, ಸಾಕಷ್ಟು ಬೇಡಿಕೆ ಜೊತೆ ಲಕ್ಷಾಂತರ ರೂ. ಆದಾಯ!


ಖಾಲಿಯಿರುವ ಹುದ್ದೆಗಳು:


ಒಟ್ಟು 13 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಇದರಲ್ಲಿ ರೆಸಿಡೆಂಟ್ ಇಂಜಿನಿಯರ್, ಅಸಿಸ್ಟೆಂಟ್ ರೆಸಿಡೆಂಟ್ ಇಂಜಿನಿಯರ್ ಇತ್ಯಾದಿ ಹುದ್ದೆಗಳು ಸೇರಿವೆ.


ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ: 


ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಇಂಜಿನಿಯರಿಂಗ್ ಪದವಿ/ಸಿವಿಲ್/ಎಲೆಕ್ಟ್ರಿಕಲ್ ಇತ್ಯಾದಿಗಳಲ್ಲಿ ಡಿಪ್ಲೊಮಾ ಮತ್ತು ಇತರ ನಿಗದಿತ ಅರ್ಹತೆಗಳು ಮತ್ತು ಕೆಲಸದ ಅನುಭವವನ್ನು ಹೊಂದಿರಬೇಕು. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು ಹುದ್ದೆಗೆ ಅನುಗುಣವಾಗಿ 40/50 ವರ್ಷಗಳಿಗೆ ನಿಗದಿಪಡಿಸಲಾಗಿದೆ.


ಆಯ್ಕೆ ಪ್ರಕ್ರಿಯೆ ಮತ್ತು ವೇತನ : 


ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ವಾಕ್-ಇನ್-ಇಂಟರ್‌ವ್ಯೂಗೆ ಕರೆಯಲಾಗುವುದು. ಹುದ್ದೆಗೆ ಅನುಗುಣವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000 ರೂ.ನಿಂದ 2,20,000 ರೂ. ವರೆಗೆ ಸಂಬಳ ನೀಡಲಾಗುತ್ತದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ 600 ಪಾವತಿಸಬೇಕಾಗುತ್ತದೆ.


ಇದನ್ನೂ ಓದಿ: ಶೀಘ್ರದಲ್ಲೇ NEET UG 2023 ಕೌನ್ಸೆಲಿಂಗ್, ಅಗತ್ಯವಿರುವ ದಾಖಲೆಗಳ ಪಟ್ಟಿ‌ ಇಲ್ಲಿದೆ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.