RRB Recruitment 2024: ಭಾರತೀಯ ರೈಲ್ವೆ ಇಲಾಖೆಯ ಭೂ ಅಭಿವೃದ್ಧಿ ಪ್ರಾಧಿಕಾರದಲ್ಲಿ(RLDA) ಖಾಲಿಯಿರುವ ಜಂಟಿ ಜನರಲ್ ಮ್ಯಾನೇಜರ್(ಸಿವಿಲ್)/ಡೆಪ್ಯುಟಿ ಜನರಲ್ ಮ್ಯಾನೇಜರ್(ಸಿವಿಲ್), ಮ್ಯಾನೇಜರ್/ಅಸಿಸ್ಟೆಂಟ್ ಮ್ಯಾನೇಜರ್ (ಸಿವಿಲ್) ಮತ್ತು ಮ್ಯಾನೇಜರ್/ಅಸಿಸ್ಟೆಂಟ್ ಮ್ಯಾನೇಜರ್(ಎಲೆಕ್ಟ್ರಿಕಲ್ ಇಂಜಿನಿಯರಿಂಗ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://rlda.indianrailways.gov.in/ ಮೂಲಕವೂ ಸಹ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಮೇ 27ರವರೆಗೆ ಅರ್ಜಿ ಸಲ್ಲಿಸಬಹುದು. 


ಇದನ್ನೂ ಓದಿ: 'ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ'


ಹುದ್ದೆಗಳ ಸಂಖ್ಯೆ: 1 ಜಂಟಿ ಜನರಲ್ ಮ್ಯಾನೇಜರ್(ಸಿವಿಲ್)/ಡೆಪ್ಯುಟಿ ಜನರಲ್ ಮ್ಯಾನೇಜರ್(ಸಿವಿಲ್), 2 ಮ್ಯಾನೇಜರ್/ಅಸಿಸ್ಟೆಂಟ್ ಮ್ಯಾನೇಜರ್(ಸಿವಿಲ್) ಮತ್ತು 1 ಮ್ಯಾನೇಜರ್/ಅಸಿಸ್ಟೆಂಟ್ ಮ್ಯಾನೇಜರ್(ಎಲೆಕ್ಟ್ರಿಕಲ್ ಇಂಜಿನಿಯರಿಂಗ್) ಹುದ್ದೆಗಳು ಖಾಲಿಯಿವೆ.


ವಿದ್ಯಾರ್ಹತೆ ಹಾಗೂ ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಲು ಸೂಚಿಸಲಾಗಿದೆ. 


ಇದನ್ನೂ ಓದಿ: ಆಡಿಯೋ ಸಂಭಾಷಣೆಯಲ್ಲಿ ಡಿಕೆಶಿ ಪಾತ್ರ ಸ್ಪಷ್ಟ, ಕೂಡಲೇ ರಾಜೀನಾಮೆ ನೀಡಿ: ಹೆಚ್.ಡಿ ಕುಮಾರಸ್ವಾಮಿ ಆಗ್ರಹ


ಅರ್ಜಿ ಸಲ್ಲಿಸುವುದು ಹೇಗೆ: ಅಭ್ಯರ್ಥಿಗಳು ಭಾರತೀಯ ರೈಲ್ವೆ ಇಲಾಖೆ ಭೂ ಅಭಿವೃದ್ಧಿ ಪ್ರಾಧಿಕಾರದ ಈ ನೇಮಕಾತಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು ಮತ್ತು ಸಂಬಂಧಿತ ದಾಖಲೆಗಳೊಂದಿಗೆ ಈ ವಿಳಾಸಕ್ಕೆ ಕಳುಹಿಸಬೇಕು. ವಿಳಾಸ: ಡೆಪ್ಯುಟಿ ಜನರಲ್ ಮ್ಯಾನೇಜರ್(HR) ರೈಲ್ವೆ ಭೂ ಅಭಿವೃದ್ಧಿ ಪ್ರಾಧಿಕಾರ, ಯುನಿಟ್ ನಂ.702-B, 7ನೇ ಮಹಡಿ, ಕನೆಕ್ಟಸ್ ಟವರ್-2, DMRC ಕಟ್ಟಡ, ಅಜ್ಮೇರಿ ಗೇಟ್, ದೆಹಲಿ-11000, ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಅರ್ಜಿ ನಮೂನೆಯ ಹಾರ್ಡ್ ಕಾಪಿಯನ್ನು ಇಲ್ಲಿ ನಮೂದಿಸಿರುವ ವಿಳಾಸಕ್ಕೆ ಕಳುಹಿಸಬೇಕು, ಇಲ್ಲದಿದ್ದರೆ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.