Railway Recruitment 2024: ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿ
Railway Recruitment 2024: ಆಗ್ನೇಯ ಮಧ್ಯ ರೈಲ್ವೆ ನೇಮಕಾತಿಯ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ ಪೂರ್ಣಗೊಳಿಸಿರಬೇಕು.
Railway Recruitment 2024: ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 733 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 12ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ.
ಹುದ್ದೆಯ ಮಾಹಿತಿ: ಕಾರ್ಪೆಂಟರ್- 38, COPA- 100, ಡ್ರಾಫ್ಟ್ಸ್ಮ್ಯಾನ್- 10, ಎಲೆಕ್ಟ್ರಿಷಿಯನ್- 137, ಎಲೆಕ್ಟ್ರಿಷಿಯನ್ (ಮೆಕ್ಯಾನಿಕ್)- 5, ಫಿಟ್ಟರ್- 187, ಮೆಷಿನಿಸ್ಟ್- 4, ಪೈಂಟರ್- 42, ಪ್ಲಂಬರ್- 25, ಮೆಕ್ಯಾನಿಕ್(RAC)- 15, SMW- 4, ಸ್ಟೆನೊ(ಇಂಗ್ಲಿಷ್)- 27, ಸ್ಟೆನೊ (ಹಿಂದಿ)- 19, ಡೀಸೆಲ್ ಮೆಕ್ಯಾನಿಕ್- 12, ಟರ್ನರ್- 4, ವೆಲ್ಡರ್- 4, ವೈರ್ಮ್ಯಾನ್- 80, ಕಾಮಿಕಲ್ ಲ್ಯಾಬೊರೇಟರಿ ಅಸಿಸ್ಟೆಂಟ್- 4 ಮತ್ತು ಡಿಜಿಟಲ್ ಫೋಟೋಗ್ರಾಫರ್ ಹುದ್ದೆಗಳು ಖಾಲಿ ಇವೆ.
ಇದನ್ನೂ ಓದಿ: ಪ್ರಶಾಂತ್ ಸಂಬರ್ಗಿಗೆ ಜೀವ ಬೆದರಿಕೆ ಸಂದೇಶ..! ಎಫ್ಐಆರ್ ದಾಖಲು
ವಿದ್ಯಾರ್ಹತೆ: ಆಗ್ನೇಯ ಮಧ್ಯ ರೈಲ್ವೆ ನೇಮಕಾತಿಯ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ ಪೂರ್ಣಗೊಳಿಸಿರಬೇಕು.
ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 12, 2024ಕ್ಕೆ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಉದ್ಯೋಗದ ಸ್ಥಳ: ಛತ್ತೀಸ್ಗಢದ ಬಿಲಸ್ಪುರ
ವೇತನ: ಅರ್ಹತೆಗೆ ಅನುಗುಣವಾಗಿ ವೇತನ ನೀಡಲಾಗುತ್ತದೆ
ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ: ಶಾರ್ಟ್ಲಿಸ್ಟಿಂಗ್, ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇರವಾಗಿ ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್‌ಗೆ https://www.apprenticeshipindia.gov.in/Apply ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಏಪ್ರಿಲ್ 12 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.