Railway Recruitment 2024: ನಿರುದ್ಯೋಗಿ ಯುವಕ-ಯುವತಿಯರಿಗೆ ಭಾರತೀಯ ರೈಲ್ವೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಒಟ್ಟು 5,647 ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ರೈಲ್ವೆ ವಿಭಾಗಗಳಲ್ಲಿ ಅಗತ್ಯ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಲೋಕೋ ಪೈಲಟ್, ಸಹಾಯಕ ಲೋಕೋ ಪೈಲಟ್, ಕ್ಲರ್ಕ್ ಸೇರಿದಂತೆ ಹಲವಾರು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.


COMMERCIAL BREAK
SCROLL TO CONTINUE READING

ಈಶಾನ್ಯ ಫ್ರಾಂಟಿಯರ್ ರೈಲ್ವೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಂದರ್ಶನ ಮತ್ತು ಲಿಖಿತ ಪರೀಕ್ಷೆಯಿಲ್ಲದೆ ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲು ಇದು ಸುವರ್ಣ ಅವಕಾಶವಾಗಿದೆ. ರೈಲ್ವೆ ನೇಮಕಾತಿ ಸೆಲ್-ನಾರ್ತ್ ಈಸ್ಟ್ ಫ್ರಾಂಟಿಯರ್ ರೈಲ್ವೇ NFR ಅಡಿ ವಿಭಾಗ/ವರ್ಕ್‌ಶಾಪ್‌ಗಳಲ್ಲಿ ಆಕ್ಟ್ ಅಪ್ರೆಂಟಿಸ್ ತರಬೇತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. 


ಇದನ್ನೂ ಓದಿ: 2025ರಲ್ಲಿ ಭರ್ಜರಿ ರಜಾ-ಮಜಾ... ಒಟ್ಟು 51 ದಿನಗಳ ರಜೆ ಘೋಷಣೆ ಮಾಡಿದ ಕೇಂದ್ರ ಸರ್ಕಾರ: ಇಲ್ಲಿದೆ ನೋಡಿ ರಜೆಯ ಸಂಪೂರ್ಣ ಪಟ್ಟಿ


ಈ ನೇಮಕಾತಿಯಡಿ 5,647 ಉದ್ಯೋಗಗಳನ್ನು ಭರ್ತಿ ಮಾಡಲಾಗುವುದು. ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಇಂಜಿನಿಯರಿಂಗ್, S & T, ಪರ್ಸನಲ್, ಅಕೌಂಟ್ಸ್ ಮತ್ತು ಮೆಡಿಕಲ್ ವಿಭಾಗಗಳ ಹುದ್ದೆಗಳು ಭರ್ತಿಯಾಗಲಿವೆ. ಸಂದರ್ಶನ ಮತ್ತು ಲಿಖಿತ ಪರೀಕ್ಷೆಯಿಲ್ಲದೆ ನೀವು ಈ ಉದ್ಯೋಗ ಪಡೆಯಬಹುದು.  


ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು TEN ಜೊತೆಗೆ ಸಂಬಂಧಿತ ಟ್ರೇಡ್‌ನಲ್ಲಿ ITI, INTER, MLT ಉತ್ತೀರ್ಣರಾಗಿರಬೇಕು.


ವಯೋಮಿತಿ: ಅಭ್ಯರ್ಥಿಗಳ ವಯಸ್ಸು 15-24 ವರ್ಷಗಳ ನಡುವೆ ಇರಬೇಕು. SC/ST ಅಭ್ಯರ್ಥಿಗಳಿಗೆ 5 ವರ್ಷ, OBCಗಳಿಗೆ 3 ವರ್ಷ ಮತ್ತು ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.


ಆಯ್ಕೆ ಪ್ರಕ್ರಿಯೆ: ಐಟಿಐ ಅಂಕಗಳು, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST, ಅಂಗವಿಕಲ, ಇಬಿಸಿ ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ.


ಇದನ್ನೂ ಓದಿ: ನನ್ನ ಅಮ್ಮನನ್ನು ಹುಡುಕಿಕೊಡಿ.. ಪ್ಲೀಸ್‌..!! ತಾಯಿಯಿಂದ ದೂರಾದ ಆನೆಮರಿ, ನಡುರಸ್ತೆಯಲ್ಲಿ ಏಕಾಂಗಿ.. ವಿಡಿಯೋ ನೋಡಿದೆ.. ತಿಳಿದಂತೆ ಕಣ್ಣೀರು ಬಂತು.. 


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 3ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ನವೆಂಬರ್ 4ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ರೈಲ್ವೆ ಇಲಾಖೆಯ ಅಧಿಕೃತ ವೆಬ್‌ಸೈಟ್ www.rrcpryj.org ಗೆ ಭೇಟಿ ನೀಡಬೇಕು...


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ