Railway Recruitment: ಭಾರತೀಯ ರೈಲ್ವೆ ನೇಮಕಾತಿ, 790 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Indian Railway Jobs 2023: ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 234 ಅಸಿಸ್ಟೆಂಟ್ ಲೋಕೋ ಪೈಲೆಟ್, 27 ಟ್ರೈನಿ ಮ್ಯಾನೇಜರ್, 168 ಜ್ಯೂನಿಯರ್ ಇಂಜಿನಿಯರ್ ಮತ್ತು 361 ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.  

Written by - Zee Kannada News Desk | Last Updated : Aug 3, 2023, 01:30 PM IST
  • ನೈರುತ್ಯ ರೈಲ್ವೆ ಇಲಾಖೆಯ 790 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ
  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ 30ರೊಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ
  • ಅಸಿಸ್ಟೆಂಟ್ ಲೋಕೋ ಪೈಲೆಟ್, ಟೆಕ್ನೀಶಿಯನ್ ಮತ್ತು ಟ್ರೈನಿ ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ
Railway Recruitment: ಭಾರತೀಯ ರೈಲ್ವೆ ನೇಮಕಾತಿ, 790 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ title=
790 ಹುದ್ದೆಗಳ ನೇಮಕಾತಿ

ನವದೆಹಲಿ: ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 790 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ 30ರೊಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.  

ಈ ಸಂಬಂಧ ನೈರುತ್ಯ ರೈಲ್ವೆ ಇಲಾಖೆಯ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಅಸಿಸ್ಟೆಂಟ್ ಲೋಕೋ ಪೈಲೆಟ್, ಟೆಕ್ನೀಶಿಯನ್ ಮತ್ತು ಟ್ರೈನಿ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಹುದ್ದೆಗಳ ವಿವರ: ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 234 ಅಸಿಸ್ಟೆಂಟ್ ಲೋಕೋ ಪೈಲೆಟ್, 27 ಟ್ರೈನಿ ಮ್ಯಾನೇಜರ್, 168 ಜ್ಯೂನಿಯರ್ ಇಂಜಿನಿಯರ್ ಮತ್ತು 361 ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.  

ಇದನ್ನೂ ಓದಿ: ಆಗಸ್ಟ್ 5ರಂದು ಭಾರತದ ಬುಡಕಟ್ಟು ಪರಂಪರೆಯ ಆಚರಣೆ: Zee Media ಸಹಕಾರದೊಂದಿಗೆ ‘ಜಂಜಾಟಿ ವಿಕಾಸ್’ ಸಂಭ್ರಮ

ವಿದ್ಯಾರ್ಹತೆ: ಅಭ್ಯರ್ಥಿಗಳು ಅಸಿಸ್ಟೆಂಟ್ ಲೋಕೋ ಪೈಲಟ್ ಹಾಗೂ ಟೆಕ್ನಿಶಿಯನ್ ಹುದ್ದೆಗಳಿಗೆ SSLC ಮತ್ತು ಐಟಿಐ, ಪದವಿ ಮಾಡಿರಬೇಕು. ಜ್ಯೂನಿಯರ್ ಇಂಜಿನಿಯರಿಂಗ್ ಹುದ್ದೆಗಳಿಗೆ ಡಿಪ್ಲೋಮಾ ಪದವಿ ಮತ್ತು ಟೆಕ್ನಿಶಿಯನ್ ಹುದ್ದೆಗೆ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಗರಿಷ್ಠ ವಯೋಮಿತಿ 42 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?: ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು www.rrcmas.in ವೆಬ್‍ಸೈಟ್‍ಗೆ ಭೇಟಿ ನೀಡಿ ಆನ್‍ಲೈನ್‍ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ, ಬಹು ಆಯ್ಕೆ ಮಾದರಿ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಆಯ್ಕೆಯಾದ ಅರ್ಹ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ನಡೆಸಿ, ನೇಮಕಾತಿ ಆದೇಶವನ್ನು ನೀಡಲಾಗುತ್ತದೆ.

ಇದನ್ನೂ ಓದಿ: ರೈಲು ಡಿಕ್ಕಿಯಾಗಿ ಸತ್ತ ಕೋತಿಗೆ ಹಿಂದೂ ವಿಧಿಯಂತೆ ಅಂತಿಮ ಸಂಸ್ಕಾರ! ಸಮಾಧಿ ಸ್ಥಳದಲ್ಲಿ ಮಂದಿರ ನಿರ್ಮಿಸಲು ಸಿದ್ಧತೆ

ಅರ್ಜಿ ಸಲ್ಲಿಕೆಗೆ ಆಗಸ್ಟ್ 30 ಕೊನೆಯ ದಿನಾಂಕ ಆಗಿರುತ್ತದೆ. ಈ ಹುದ್ದೆಗಳಿಗೆ ಸಂಬಂಧಿಸಿದ ಮತ್ತುಷ್ಟು ಮಾಹಿತಿಗೆ ಆಸಕ್ತ ಅಭ್ಯರ್ಥಿಗಳು 044-28213185 ಸಂಖ್ಯೆಗೆ ಕರೆ ಮಾಡಬಹುದಾಗಿದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News