ಭಾರತೀಯ ಸೇನೆಯಲ್ಲಿ ನರ್ಸಿಂಗ್ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟ
Recruitment In Indian Army: ಭಾರತೀಯ ಸೇನೆಯಲ್ಲಿ ಸೋಲ್ಜರ್ ಟೆಕ್ನಿಕಲ್ ನರ್ಸಿಂಗ್ ಸಹಾಯಕ ಹುದ್ದೆಗಳಿಗೆ ಬಂಪರ್ ನೇಮಕಾತಿ ಪ್ರಕಟಗೊಂಡಿದೆ. ಭಾರತೀಯ ಸೇನೆಯು ವಲಯವಾರು ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಕುರಿತಂತೆ ಇಲ್ಲಿದೆ ಸಂಪೂರ್ಣ ಮಾಹಿತಿ.
Recruitment In Indian Army: ಭಾರತೀಯ ಸೇನೆಯಲ್ಲಿ ನರ್ಸಿಂಗ್ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟವಾಗಿದ್ದು ವಲಯವಾರು ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಈಗಾಗಲೇ ಈ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಭಾರತೀಯ ಸೇನೆಯು ಇಲ್ಲಿಯವರೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ 12 ವಲಯ ನೇಮಕಾತಿ ಕಚೇರಿಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ - join Indianarmy.nic.in. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ನೇಮಕಾತಿಗೆ ಸಂಬಂಧಿಸಿದ ಮಾಹಿತಿಯನ್ನು ಕೂಲಂಕುಷವಾಗಿ ಓದುವುದು ಅಗತ್ಯವಾಗಿದೆ.
ವಿದ್ಯಾರ್ಹತೆ:
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ವಿಜ್ಞಾನ ಸ್ಟ್ರೀಮ್‌ನೊಂದಿಗೆ 12 ನೇ ತರಗತಿ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ವಿಜ್ಞಾನ ವಿಭಾಗದಲ್ಲಿ, ಅವರು ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಇಂಗ್ಲಿಷ್ ವಿಷಯಗಳನ್ನು ಓದಿರಬೇಕು ಮತ್ತು ಪ್ರತಿ ವಿಷಯದಲ್ಲಿ ಕನಿಷ್ಠ 40% ಅಂಕಗಳನ್ನು ಗಳಿಸಿರಬೇಕು. ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
ಇದನ್ನೂ ಓದಿ- Latest Railway Vacancies: ರೈಲ್ವೇ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಗುಡ್ ನ್ಯೂಸ್!
ಅಪ್ಲಿಕೇಶನ್ ಪ್ರಕ್ರಿಯೆ:
ಅಪ್ಲಿಕೇಶನ್ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್‌ಲೈನ್ ಪ್ರಕ್ರಿಯೆ ಆಗಿರಲಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ನೀವು ಭಾರತೀಯ ಸೇನೆಯ ಸೋಲ್ಜರ್ ಟೆಕ್ನಿಕಲ್ ನರ್ಸಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ 22 ಮಾರ್ಚ್ 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ, ಎಸ್‌ಸಿ/ಎಸ್‌ಟಿ ವರ್ಗದವರಿಗೆ ಅರ್ಜಿ ಶುಲ್ಕ 250 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೋಡ್ ಮೂಲಕ ಮಾತ್ರ ಪಾವತಿಸಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯಸ್ಸಿನ ಮಿತಿ 17.5 ವರ್ಷಗಳು ಮತ್ತು ಗರಿಷ್ಠ ವಯಸ್ಸು 23 ವರ್ಷಗಳು.
ಇದನ್ನೂ ಓದಿ- ನಿಮ್ಮ ರೆಸ್ಯೂಮ್‌ನ ಮಾದರಿಯಿಂದಲೂ ಸಿಗುತ್ತೆ ಉತ್ತಮ ಜಾಬ್
ಆಯ್ಕೆ ವಿಧಾನ:
ಭಾರತೀಯ ಸೇನೆಯಲ್ಲಿ ನರ್ಸಿಂಗ್ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ, ದೈಹಿಕ ಗುಣಮಟ್ಟದ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.