ಬಿಬಿಎಂಪಿಯಲ್ಲಿ 444 ಹುದ್ದೆಗಳ ನೇಮಕಾತಿ: ವಾಕ್ ಇನ್ ಇಂಟರ್‌ವ್ಯೂಗೆ ಅರ್ಜಿ ಆಹ್ವಾನ
BBMP Recruitment 2024: ವಾಕ್ ಇನ್ ಇಂಟರ್‌ವ್ಯೂಗೆ ಪಾಲಿಕೆ ನಿಗದಿಪಡಿಸಿರುವ ಸ್ಥಳಗಳಲ್ಲಿ ಈ ತಿಂಗಳ 13ರಿಂದ 15ರವರೆಗೆ ಆಯಾ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಆಧರಿಸಿ ನೇಮಕ ಪ್ರಕ್ರಿಯೆ ನಡೆಯಲಿದೆ.
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನುಷ್ಠಾನಕ್ಕೆ ತರಬೇಕಿರುವ ಆರೋಗ್ಯ ವಲಯದ ಪ್ರಮುಖ ಕಾರ್ಯಕ್ರಮಗಳ ಜಾರಿಗೆ ಅಗತ್ಯ ಸಿಬ್ಬಂದಿ ನಿಯೋಜಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ 444 ಹುದ್ದೆಗಳ ನೇಮಕಾತಿಗೆ ವಾಕ್ ಇನ್ ಇಂಟರ್‌ವ್ಯೂಗೆ ಪಾಲಿಕೆಯು ಅರ್ಹ ಯುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ (NUHM), ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ (NTEP), ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಂಬಾಕು ನಿಯಂತ್ರಣ ಕಾರ್ಯಕ್ರಮ, ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಹಾಗೂ ಅಂಧತ್ವ ನಿರ್ಮೂಲನಾ ಕಾರ್ಯಕ್ರಮದಡಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ನೇಮಕಾತಿ ನಡೆಯಲಾಗಿದೆ.
ಇದನ್ನೂ ಓದಿ: ಡಿಕೆ ಸುರೇಶ್‌ಗೆ ಗುಂಡಿಕ್ಕಿ ಕೊಲ್ಲಿ ಎಂಬ ಈಶ್ವರಪ್ಪ ಹೇಳಿಕೆ ವಿಚಾರ
ವಾಕ್ ಇನ್ ಇಂಟರ್‌ವ್ಯೂಗೆ ಪಾಲಿಕೆ ನಿಗದಿಪಡಿಸಿರುವ ಸ್ಥಳಗಳಲ್ಲಿ ಈ ತಿಂಗಳ 13ರಿಂದ 15ರವರೆಗೆ ಆಯಾ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಆಧರಿಸಿ ನೇಮಕ ಪ್ರಕ್ರಿಯೆ ನಡೆಯಲಿದೆ.
ಆಯ್ಕೆಯಾದ ಅಭ್ಯರ್ಥಿಗಳನ್ನು 1 ವರ್ಷದ ಅವಧಿಗೆ ಗುತ್ತಿಗೆಯಡಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇತ್ರತಜ್ಞರು, ಮಕ್ಕಳ ತಜ್ಞರು, ಫಾರ್ಮಾಸಿಸ್ಟ್, ಲ್ಯಾಬ್ ಟೆಕ್ನಿಶಿಯನ್ಸ್, ಸ್ಟಾಪ್ ನರ್ಸ್ ಹಾಗೂ ಇತರ ಅರೆವೈದ್ಯ ಸಿಬ್ಬಂದಿ ಹುದ್ದೆಗಳ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಎಲ್ಲಾ ಹುದ್ದೆಗಳಿಗೂ ಕೇವಲ 1 ವರ್ಷದ ಅವಧಿಗೆ ಮಾತ್ರ ನೇಮಕಾತಿ ಅನ್ವಯವಾಗಲಿದೆ ಅಂತಾ ಪಾಲಿಕೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಯಶವಂತಪುರ ಪೋಲೀಸ್ ಠಾಣೆಗೆ ಈಶ್ವರಪ್ಪ ವಿರುದ್ದ ದೂರು ದಾಖಲು
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.