ಬೆಂಗಳೂರು, 23 ಮೇ, 2024: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿದೆ. 


COMMERCIAL BREAK
SCROLL TO CONTINUE READING

ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಇಂಜಿನಿಯರ್‌(ವಿದ್ಯುತ್‌), 17 ಸಹಾಯಕ ಇಂಜಿನಿಯರ್(ಸಿವಿಲ್), 15-ಕಿರಿಯ ಇಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ.


ಇದನ್ನೂ ಓದಿ- ಖಾಸಗಿ ಶಾಲಾ ಪ್ರವೇಶ ಶುಲ್ಕ ಹಾಗೂ ಇತರೆ ಶುಲ್ಕಗಳ ವಿವರ ಪ್ರಕಟಣೆ ಕಡ್ಡಾಯ: ಶಿಕ್ಷಣ ಇಲಾಖೆ ಸುತ್ತೋಲೆ


ಅದೇ ರೀತಿ, 535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಇಂಜಿನಿಯರ್) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸಿಲಿಂಗ್‌ ನಡೆಸಿ ನೇಮಕ ಆದೇಶ ನೀಡಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರು. 


ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ  ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ ದಿನವಾಗಿದೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸಲಾಗುವುದು. ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೊಂಡ ನಂತರ, ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಮೀಸಲು ಕೋರಿರುವ ದಾಖಲೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದು ತ್ವರಿತವಾಗಿ ಸ್ಥಳ ನಿಯುಕ್ತಿ ಹಾಗೂ ನೇಮಕ ಆದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಟಿಸಿಎಲ್‌ ಪ್ರಕಟಣೆ ತಿಳಿಸಿದೆ.


ಇದನ್ನೂ ಓದಿ-ಆ ಬ್ಯಾಚ್‌ ವಿಜಯ್ ದೇವರಕೊಂಡರನ್ನು ತುಳಿಯುತ್ತಿದೆ..! ನಟ ಆನಂದ್‌ ಶಾಕಿಂಗ್‌ ಹೇಳಿಕೆ


"ರಾಜ್ಯಾದ್ಯಂತ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ವಿದ್ಯುತ್‌ ಪ್ರಸರಣ ಸೇವೆ ಒದಗಿಸುವುದು ನಮ್ಮ ಬದ್ಧತೆ. ಈ ನಿಟ್ಟಿನಲ್ಲಿ ಪಾರದರ್ಶಕವಾಗಿ ನೇಮಕ ಪ್ರಕ್ರಿಯೆ ನಡೆಸಿ, ಅಭ್ಯರ್ಥಿಗಳಿಗೆ ಕೆಲಸದ ಆದೇಶ ನೀಡಲಾಗಿದೆ. ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು".
- ಕೆ.ಜೆ ಜಾರ್ಜ್‌, ಇಂಧನ ಸಚಿವ


"902 ಹೊಸ ಉದ್ಯೋಗಿಗಳ ನೇಮಕದ ಮೂಲಕ ಕೆಪಿಟಿಸಿಎಲ್‌ ಇನ್ನಷ್ಟು ಬಲಗೊಂಡು, ಗುಣಮಟ್ಟದ ಸೇವೆಯನ್ನು ಮುಂದುವರಿಸಲಿದೆ. ಆಯ್ಕೆ ಪ್ರಕ್ರಿಯೆಯನ್ನುಅತ್ಯಂತ ಪಾರದರ್ಶಕ ಮತ್ತು ಸಮರ್ಥವಾಗಿ ನಡೆಸಲಾಗಿದೆ. 
- ಪಂಕಜ್ ಕುಮಾರ್ ಪಾಂಡೆ, ವ್ಯವಸ್ಥಾಪಕ ನಿರ್ದೇಶಕ, ಕೆಪಿಟಿಸಿಎಲ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.