ರಿಲಯನ್ಸ್ ಫೌಂಡೇಷನ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : 2 ಲಕ್ಷದಿಂದ 6 ಲಕ್ಷದವರೆಗಿನ ಸ್ಕಾಲರ್ ಶಿಪ್ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ

ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಹೀಗಿದೆ. 

Written by - Ranjitha R K | Last Updated : Aug 21, 2024, 04:59 PM IST
  • ರಿಲಯನ್ಸ್ ಫೌಂಡೇಷನ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
  • 5,100 ಅತ್ಯುತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿ ವೇತನ
  • ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೀಗಿದೆ
ರಿಲಯನ್ಸ್ ಫೌಂಡೇಷನ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : 2 ಲಕ್ಷದಿಂದ 6 ಲಕ್ಷದವರೆಗಿನ ಸ್ಕಾಲರ್ ಶಿಪ್ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ  title=

ಮುಂಬಯಿ : ರಿಲಯನ್ಸ್ ಫೌಂಡೇಷನ್ ನಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ವೇತನವನ್ನು ವಿತರಿಸುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.   ಈ ಮೂಲಕ ಭಾರತದಾದ್ಯಂತ ಪದವಿ ಶಿಕ್ಷಣ ಮತ್ತು ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿರುವ 5,100 ಅತ್ಯುತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.ಈ ಮೂಲಕ ಆರ್ಥಿಕ ಹೊರೆಯಿಲ್ಲದೆ ಅಧ್ಯಯನವನ್ನು ಮುಂದುವರಿಸಲು ವಿದ್ಯಾರ್ಥಿಗಳಿಗೆ ಸಹಾಯ ಮಾಡಲಾಗುತ್ತದೆ. 

ರಿಲಯನ್ಸ್ ಫೌಂಡೇಷನ್ ನವಭಾರತ ನಿರ್ಮಾಣಕ್ಕೆ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿರುವ,ಎಂಜಿನಿಯರಿಂಗ್,ತಂತ್ರಜ್ಞಾನ, ಇಂಧನ ಮತ್ತು ಜೀವ ವಿಜ್ಞಾನ ಈ ವಿಷಯಗಳಲ್ಲಿ ವ್ಯಾಸಂಗ ಮಾಡುತ್ತಿರುವ 100 ಅಸಾಧಾರಣ- ಅರ್ಹ ವಿದ್ಯಾರ್ಥಿಗಳನ್ನು ಈ ವಿದ್ಯಾರ್ಥಿ ವೇತನಕ್ಕಾಗಿ ಆಯ್ಕೆ ಮಾಡಲಾಗುತ್ತದೆ.ಎಲ್ಲಾ   ವಿದ್ಯಾರ್ಥಿ ವೇತನಗಳನ್ನು ಶೈಕ್ಷಣಿಕ ಅರ್ಹತೆ ಮತ್ತು ಆರ್ಥಿಕ ಸ್ಥಿತಿಯ ಆಧಾರದ ಮೇಲೆ ನೀಡಲಾಗುತ್ತದೆ. 

ಇದನ್ನೂ ಓದಿ : NMMS ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ 

ಅಂಕ- ಆರ್ಥಿಕ ಸ್ಥಿತಿಯ ಮಾನದಂಡ : 
ರಿಲಯನ್ಸ್ ಫೌಂಡೇಷನ್ ಪದವಿ ಶಿಕ್ಷಣ ಪಡೆಯುತ್ತಿರುವವರಿಗೆ ನೀಡುವ ವಿದ್ಯಾರ್ಥಿ ವೇತನವು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡುತ್ತದೆ.ಈ ವಿದ್ಯಾರ್ಥಿ ವೇತನವನ್ನು ಅಂಕ- ಆರ್ಥಿಕ ಸ್ಥಿತಿಯ ಮಾನದಂಡದ ಆಧಾರದ ಮೇಲೆ 5,000 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡಲಾಗುವುದು

ಪದವಿ ವಿದ್ಯಾರ್ಥಿಗಳಿಗೆ  2 ಲಕ್ಷ ರೂಪಾಯಿ :
ಈ ಅನುದಾನದ ಜೊತೆಗೆ ಲಕ್ಷ ಪದವಿ ವಿದ್ಯಾರ್ಥಿಗಳಿಗೆ ೨ ಲಕ್ಷ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 6 ಲಕ್ಷ  ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ? :
೧. ವಿದ್ಯಾರ್ಥಿಗಳು www.scholarships.reliancefoundation.org ಈ ವೆಬ್ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. 
೨. ಆಯ್ಕೆ ಪ್ರಕ್ರಿಯೆಯು ಪದವಿ ವಿದ್ಯಾರ್ಥಿಗೆ ಅರ್ಹತೆ ಮತ್ತು ಆರ್ಥಿಕ ಹಿನ್ನೆಲೆಯ ಮೌಲ್ಯಮಾಪನವನ್ನು ಒಳಗೊಂಡಿದೆ. 
೩. ಸ್ನಾತಕೋತ್ತರ ಪದವಿ ವಿದ್ಯಾರ್ಥಿವೇತನಕ್ಕಾಗಿ, ಶೈಕ್ಷಣಿಕ ಸಾಧನೆಗಳು, ಸಂದರ್ಶನಗಳು ಈ ಎಲ್ಲವೂ ಭಾರತದಾದ್ಯಂತದ ಪ್ರತಿಭೆಗಳನ್ನು ಗುರುತಿಸಲು ಸ್ಪರ್ಧಾತ್ಮಕ ಆಯ್ಕೆ ಪ್ರಕ್ರಿಯೆಯ ಭಾಗವಾಗಿದೆ.

ಇದನ್ನೂ ಓದಿ :  ನೀವು ವೃತ್ತಿಪರ ಕೋರ್ಸ್ ಅಧ್ಯಯನ ಮಾಡುತ್ತಿದ್ದಿರಾ? ಸರ್ಕಾರದಿಂದ ಸಿಗಲಿದೆ ಅರಿವು ವಿದ್ಯಾಭ್ಯಾಸ ಸಾಲ..!

ಅರ್ಜಿಗಳನ್ನು ಸಲ್ಲಿಸುವುದಕ್ಕೆ ಅಕ್ಟೋಬರ್ 6 ಕೊನೆಯ ದಿನವಾಗಿದೆ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News