ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

BRBNMPL Recruitment 2024: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು.

Written by - Puttaraj K Alur | Last Updated : Aug 25, 2024, 06:06 PM IST
  • ಮೈಸೂರಿನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆಯಲ್ಲಿ ನೇಮಕಾತಿ
  • BRBNMPLಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
  • ಸಹಾಯಕ ವ್ಯವಸ್ಥಾಪಕರು ಮತ್ತು ಭದ್ರತಾ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ title=
BRBNMPL Recruitment 2024

BRBNMPL Recruitment 2024: ಮೈಸೂರಿನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆ (BRBNMPL)ಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ವ್ಯವಸ್ಥಾಪಕರು, ಭದ್ರತಾ ವ್ಯವಸ್ಥಾಪಕ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬಹುದು. 

ಒಟ್ಟು 4 ಹುದ್ದೆಗಳು ಖಾಲಿ ಇದ್ದು, ಇದರಲ್ಲಿ ಸಹಾಯಕ ವ್ಯವಸ್ಥಾಪಕರು (ಭದ್ರತೆ) 3, ಭದ್ರತಾ ವ್ಯವಸ್ಥಾಪಕ 1 ಹುದ್ದೆ ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: Daily GK Quiz: ಭಾರತದಲ್ಲಿ "ಸಿಟಿ ಆಫ್ ಜಾಯ್" ಎಂದು ಯಾವ ನಗರವನ್ನು ಕರೆಯಲಾಗುತ್ತದೆ?

ವಯೋಮಿತಿ & ಸಂಬಳ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರ ವಯಸ್ಸು 45-52 ವರ್ಷಗಳಾಗಿರಬೇಕು. ಆಯ್ಕೆಯಾದ ನಂತರ ಸಹಾಯಕ ವ್ಯವಸ್ಥಾಪಕರು (ಭದ್ರತೆ) ಹುದ್ದೆಗೆ 56,100 ರೂ. ಹಾಗೂ ಭದ್ರತಾ ವ್ಯವಸ್ಥಾಪಕ ಹುದ್ದೆಗೆ 69,700 ರೂ.ಗಳನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ & ಶುಲ್ಕ ವಿವರ: ಈ ಹುದ್ದೆಗಳಿಗೆ ಆಪ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. SC/ST, ಅಂಗವಿಕಲ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿ ಮಾಡುವಂತಿಲ್ಲ. ಇತರೆ ಅಭ್ಯರ್ಥಿಗಳು 300 ರೂ. ಗಳನ್ನು ಡಿಮ್ಯಾಂಡ್ ಡ್ರಾಫ್ಟ್ ಅಥವಾ ಬ್ಯಾಂಕ್ ಪೇ ಆರ್ಡರ್ ಮೂಲಕ ಹಣ ಪಾವತಿಸಬೇಕು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಇಲಾಖೆಗೆ ಕಳುಹಿಸಬೇಕು. 

ಇದನ್ನೂ ಓದಿ: ಭಾರತದ ಈ ಗ್ರಾಮದಲ್ಲಿ ಯಾವ ಮಹಿಳೆಯೂ ಬಟ್ಟೆ ಧರಿಸುವುದಿಲ್ಲ! ಇದರ ಹಿಂದಿನ ಕಾರಣ ತಿಳಿದರೆ ಶಾಕ್ ಆಗುತ್ತೀರಿ!

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಚೀಫ್ ಜನೆರಲ್ ಮ್ಯಾನೇಜರ್, ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಾಣ ಪ್ರವೈಟ್ ಲಿಮಿಟೆಡ್, ನಂ. 3 & 4, 1 ಸ್ಟೇಜ್, 1ನೇ ಹಂತ, ಬಿಟಿಎಂ ಲೇಔಟ್, ಬನ್ನೇರುಘಟ್ಟ ರೋಡ್, ಪೋಸ್ಟ್ ಬಾಕ್ಸ್ ನಂ. 2924, ಡಿ.ಆರ್ ಕಾಲೇಜ್ ಪಿ.ಓ., ಬೆಂಗಳೂರು-560029 ಈ ವಿಳಾಸಕ್ಕೆ ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 6ರೊಳಗೆ ಇಲಾಖೆಗೆ ಕಳುಹಿಸಬೇಕು. ಕೆಲವು ಪ್ರದೇಶಗಳಿಗೆ ಸೆಪ್ಟೆಂಬರ್ 13ರವರೆಗೆ ವಿಸ್ತರಣೆ ಮಾಡಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News