Job Alert: ಫೈನಾನ್ಸ್​​​ ಕ್ಷೇತ್ರದಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿರಿ

RHFL recruitment 2024: ರೆಪ್ಕೊ ಹೋಮ್ ಫೈನಾನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ, ಬಿ.ಎಸ್ಸಿ ಪೂರ್ಣಗೊಳಿಸಿರಬೇಕು.

Written by - Puttaraj K Alur | Last Updated : Mar 29, 2024, 01:20 PM IST
  • ರೆಪ್ಕೊ ಹೋಮ್ ಫೈನಾನ್ಸ್‌ನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
  • ಅಸಿಸ್ಟೆಂಟ್ ಮ್ಯಾನೇಜರ್/ಎಕ್ಸಿಕ್ಯೂಟಿವ್​/ಸೀನಿಯರ್ ಎಕ್ಸಿಕ್ಯೂಟಿವ್/ಟ್ರೈನಿ ಹುದ್ದೆಗಳ ನೇಮಕ
  • ಏಪ್ರಿಲ್ 2 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು
Job Alert: ಫೈನಾನ್ಸ್​​​ ಕ್ಷೇತ್ರದಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿರಿ title=
RHFL recruitment 2024

Repco Home Finance Limited recruitment 2024: ರೆಪ್ಕೊ ಹೋಮ್ ಫೈನಾನ್ಸ್‌ನಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅನೇಕ ಅಸಿಸ್ಟೆಂಟ್ ಮ್ಯಾನೇಜರ್/ಎಕ್ಸಿಕ್ಯೂಟಿವ್​/ಸೀನಿಯರ್ ಎಕ್ಸಿಕ್ಯೂಟಿವ್/ಟ್ರೈನಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಏಪ್ರಿಲ್ 2 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಆಸಕ್ತರು ಆಫ್​ಲೈನ್​/ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ರೆಪ್ಕೊ ಹೋಮ್ ಫೈನಾನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ, ಬಿ.ಎಸ್ಸಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: Mukhtar Ansari Death: ಹೃದಯಾಘಾತದಿಂದ ಗ್ಯಾಂಗ್ ಸ್ಟಾರ್ ಮುಖ್ತಾರ್ ಅನ್ಸಾರಿ ಸಾವು

ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗದ ಸ್ಥಳ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.

ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 16,100 ರೂ. ಸಂಬಳ ಕೊಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ವಿಳಾಸಕ್ಕೆ ಕಳುಹಿಸಬೇಕು.

ಡೆಪ್ಯುಟಿ ಜನರಲ್ ಮ್ಯಾನೇಜರ್ (HR) ರೆಪ್ಕೋ ಹೋಮ್ ಫೈನಾನ್ಸ್ ಲಿಮಿಟೆಡ್, 3ನೇ ಮಹಡಿ, ಅಲೆಕ್ಸಾಂಡರ್ ಚೌಕ, ಹೊಸ ಸಂಖ್ಯೆ 2/ ಹಳೇ ಸಂಖ್ಯೆ 34 & 35, ಸರ್ದಾರ್ ಪಟೇಲ್ ರಸ್ತೆ, ಗಿಂಡಿ, ಚೆನ್ನೈ-600 032 ಅಥವಾ ಇ-ಮೇಲ್ ಐಡಿ Personnel@repcohome.comಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.repcohome.comಗೆ ಬೇಟಿ ನೀಡಬಹುದು.

ಇದನ್ನೂ ಓದಿ: ಚಲಿಸುವ ರೈಲಿನಲ್ಲಿ ಕಳ್ಳತನ ಮಾಡಿ ಜಿಗಿದು ಪಾರಾದ ಕಳ್ಳ..! ವಿಡಿಯೋ ವೈರಲ್‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News