Repco Home Finance Limited recruitment 2024: ರೆಪ್ಕೊ ಹೋಮ್ ಫೈನಾನ್ಸ್‌ನಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅನೇಕ ಅಸಿಸ್ಟೆಂಟ್ ಮ್ಯಾನೇಜರ್/ಎಕ್ಸಿಕ್ಯೂಟಿವ್​/ಸೀನಿಯರ್ ಎಕ್ಸಿಕ್ಯೂಟಿವ್/ಟ್ರೈನಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಏಪ್ರಿಲ್ 2 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಆಸಕ್ತರು ಆಫ್​ಲೈನ್​/ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬಹುದು.


COMMERCIAL BREAK
SCROLL TO CONTINUE READING

ವಿದ್ಯಾರ್ಹತೆ: ರೆಪ್ಕೊ ಹೋಮ್ ಫೈನಾನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ, ಬಿ.ಎಸ್ಸಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: Mukhtar Ansari Death: ಹೃದಯಾಘಾತದಿಂದ ಗ್ಯಾಂಗ್ ಸ್ಟಾರ್ ಮುಖ್ತಾರ್ ಅನ್ಸಾರಿ ಸಾವು


ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಉದ್ಯೋಗದ ಸ್ಥಳ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.


ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 16,100 ರೂ. ಸಂಬಳ ಕೊಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ವಿಳಾಸಕ್ಕೆ ಕಳುಹಿಸಬೇಕು.


ಡೆಪ್ಯುಟಿ ಜನರಲ್ ಮ್ಯಾನೇಜರ್ (HR) ರೆಪ್ಕೋ ಹೋಮ್ ಫೈನಾನ್ಸ್ ಲಿಮಿಟೆಡ್, 3ನೇ ಮಹಡಿ, ಅಲೆಕ್ಸಾಂಡರ್ ಚೌಕ, ಹೊಸ ಸಂಖ್ಯೆ 2/ ಹಳೇ ಸಂಖ್ಯೆ 34 & 35, ಸರ್ದಾರ್ ಪಟೇಲ್ ರಸ್ತೆ, ಗಿಂಡಿ, ಚೆನ್ನೈ-600 032 ಅಥವಾ ಇ-ಮೇಲ್ ಐಡಿ Personnel@repcohome.comಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.repcohome.comಗೆ ಬೇಟಿ ನೀಡಬಹುದು.


ಇದನ್ನೂ ಓದಿ: ಚಲಿಸುವ ರೈಲಿನಲ್ಲಿ ಕಳ್ಳತನ ಮಾಡಿ ಜಿಗಿದು ಪಾರಾದ ಕಳ್ಳ..! ವಿಡಿಯೋ ವೈರಲ್‌


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.