RITES Recruitment 2024: ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 3 ಮ್ಯಾನೇಜರ್/ಅಸಿಸ್ಟೆಂಟ್ ಮ್ಯಾನೇಜರ್/ಸೀನಿಯರ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. 


COMMERCIAL BREAK
SCROLL TO CONTINUE READING

ರೈಲ್ವೆ ಇಲಾಖೆಯ ಕೆಲಸ ಮಾಡುವ ಆಸೆ ಹೊಂದಿರುವ ಅಭ್ಯರ್ಥಿಗಳಿಗೆ ಇದು ಸುವರ್ಣ ಅವಕಾಶವಾಗಿದೆ. ಆಸಕ್ತರು ಆನ್​ಲೈನ್​/ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಜೂನ್​ 11 ಅರ್ಜಿ ಸಲ್ಲಿಸಲು ಕೊನೆಯ ದಿನವೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಿಲಸ್ಪುರ, ಭುವನೇಶ್ವರ್‌ ಮತ್ತು ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಇದನ್ನೂ ಓದಿ: ಹರಿಯಾಣ : ರೈತರ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ, 54 ರೈಲುಗಳ ಸಂಚಾರ ರದ್ದು


ವಯೋಮಿತಿ: ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಉದ್ಯೋಗದ ಸ್ಥಳ: ಬಿಲಸ್ಪುರ, ಬೆಂಗಳೂರು ಮತ್ತು ಭುವನೇಶ್ವರ


ಆಯ್ಕೆ ಪ್ರಕ್ರಿಯೆ: ವಿದ್ಯಾರ್ಹತೆ, ಅನುಭವ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಫ್‌ಲೈನ್‌ ಮೂಲಕವೂ ಅರ್ಜಿ ಸಲ್ಲಿಸಬಹುದು. ಇದಕ್ಕೆ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ರೈಟ್ಸ್​ ಲಿಮಿಟೆಡ್​, ಶಿಖರ್, ಪ್ಲಾಟ್​ ನಂಬರ್ -1, ಸೆಕ್ಟರ್- 29, ಗುರುಗ್ರಾಮ್-122001, ಹರಿಯಾಣ ಈ ವಿಳಾಸಕ್ಕೆ ಕಳುಹಿಸಬೇಕು ಅಥವಾ ಅಭ್ಯರ್ಥಿಗಳು ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಐಡಿ desraj@rites.com ಅಥವಾ sbu.hr@rites.comಗೆ ಕಳುಹಿಸಬೇಕು.


ಇದನ್ನೂ ಓದಿ: Loksabha Election : ನಾಗ್ಪುರದಲ್ಲಿ ವಿಶ್ವದ ಅತಿ ಚಿಕ್ಕ ಮಹಿಳೆಯಿಂದ ಮತ ಚಲಾವಣೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.