ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯ ರೈಲ್ವೆ ರಕ್ಷಣಾ ದಳದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸಬ್​ ಇನ್ಸ್​​ಪೆಕ್ಟರ್​​ ಮತ್ತು ಕಾನ್ಸ್​​ಟೇಬಲ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 4,660 ಹುದ್ದೆಗಳ ನೇಮಕಾತಿ ನಡೆಯಲಿದ್ದು, SSLC ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. 


COMMERCIAL BREAK
SCROLL TO CONTINUE READING

ಹುದ್ದೆಯ ವಿವರ: ನೇಮಕಾತಿಯಡಿ ಕಾನ್ಸ್​​ಟೇಬಲ್​ 4,208 ಮತ್ತು 452 ಸಬ್​ ಇನ್ಸ್​​ಪೆಕ್ಟರ್​​ ಒಟ್ಟು 4,660 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.  


ಇದನ್ನೂ ಓದಿ: ಟಿಬೆಟಿಯನ್ ಬೌದ್ಧ ಧರ್ಮ ಗುರು ದಲೈ ಲಾಮಾ ಭೇಟಿಯಾದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್


ವಿದ್ಯಾರ್ಹತೆ: ಸಬ್​ ಇನ್ಸ್​ಪೆಕ್ಟರ್​​ ಹುದ್ದೆಗೆ ಅಭ್ಯರ್ಥಿಗಳು ಪದವಿ ಮತ್ತು ಕಾನ್ಸ್​​ಟೇಬಲ್​ ಹುದ್ದೆಗೆ 10ನೇ ತರಗತಿ ಪಾಸಾಗಿರಬೇಕು.


ವಯೋಮಿತಿ: ಸಬ್​ ಇನ್ಸ್​ಪೆಕ್ಟರ್​​ ಹುದ್ದೆಗೆ ಅಭ್ಯರ್ಥಿಯು ಕನಿಷ್ಠ 20 ರಿಂದ ಗರಿಷ್ಠ 28 ವರ್ಷ ಮತ್ತು ಕಾನ್ಸ್​​ಟೇಬಲ್​ ಹುದ್ದೆಗೆ ಕನಿಷ್ಠ 18 ರಿಂದ ಗರಿಷ್ಠ 28 ವರ್ಷ ವಯೋಮಿತಿ ಹೊಂದಿರಬೇಕು.


ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. 


ಅರ್ಜಿ ಶುಲ್ಕ: SC/ST ಮತ್ತು ನಿವೃತ್ತ ಸೇವಾದಾರರು, ಮಹಿಳೆಯರು, EBC ಅಭ್ಯರ್ಥಿಗಳಿಗೆ 250 ರೂ. ಮತ್ತು ಇತರ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವಿರುತ್ತದೆ.


ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್​ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲಾತಿ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 


ಹುದ್ದೆಗಳಿಗೆ ಅಭ್ಯರ್ಥಿಗಳು ಏಪ್ರಿಲ್​ 15ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನಾಂಕ ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು indianrailways.gov.in ಭೇಟಿ ನೀಡಬಹುದು. ಅದರಂತೆ ಕರ್ನಾಟಕದ ಅಭ್ಯರ್ಥಿಗಳು rrbbnc.gov.in ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.


ಇದನ್ನೂ ಓದಿ: ಒಡಿಶಾ : ಜಾಜ್‌ಪುರ ಮೇಲ್ಸೇತುವೆಯಿಂದ ಬಸ್ ಉರುಳಿ ಐವರು ಸಾವು, ಹಲವರಿಗೆ ಗಾಯ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.