Railway Recruitment 2024: ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 6 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶದಾದ್ಯಂತ ಖಾಲಿ ಇರುವ ಸಹಾಯಕ ಲೋಕೋ ಪೈಲಟ್‌ಗಳನ್ನು (ALP) ನೇಮಿಸಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಸುಮಾರು 1.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರ ಭಾಗವಾಗಿ ಈ ನೇಮಕಾತಿ ಡ್ರೈವ್ ನಡೆಯುತ್ತಿದೆ ಎಂದು ವರದಿಯಾಗಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರೈಲ್ವೆ ನೆಟ್‌ವರ್ಕ್ ವಿಸ್ತರಣೆಯಾಗುತ್ತಿದ್ದಂತೆ ಹೆಚ್ಚಿನ ನೇಮಕಾತಿಯ ಯೋಜನೆಯನ್ನು ಪ್ರಕಟಿಸಲಿದ್ದಾರೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ನೇಮಕಾತಿ ಬಗ್ಗೆ ಮಾಹತಿ ನೀಡಿದ್ದು, ತಾಂತ್ರಿಕ ಮತ್ತು ತಾಂತ್ರಿಕೇತರ ವಿಭಾಗಗಳು ಮತ್ತು ಗ್ರೂಪ್ ʼಡಿʼ ಹುದ್ದೆಗಳಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಯೋಜಿಸಲಾಗಿದೆ. ಕೆಲವು ಸರ್ಕಾರಿ ಸಂಸ್ಥೆಗಳಿಗಿಂತ ಭಿನ್ನವಾಗಿ ಭಾರತೀಯ ರೈಲ್ವೆ ಇಲಾಖೆಯು ಪ್ರಸ್ತುತ ಅಗತ್ಯಗಳನ್ನು ಪರಿಹರಿಸುವಲ್ಲಿ ಕೇಂದ್ರೀಕರಿಸಿದೆ.


ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ BJP 400ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲಿದೆ: ಪ್ರಧಾನಿ ಮೋದಿ


ವೈಷ್ಣವ್ ಅವರು 1.5 ಲಕ್ಷ ಹೊಸ ಉದ್ಯೋಗಿಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ALPಗಳಿಗೆ ಆಯ್ಕೆ ಪ್ರಕ್ರಿಯೆಯ ಪ್ರಾರಂಭಿಸುವ ಬಗ್ಗೆ ತಿಳಿಸಿದ್ದಾರೆ. ದೇಶದ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುವ ಸರ್ಕಾರದ ಬದ್ಧತೆಯ ಆರಂಭಿಕ ಹೆಜ್ಜೆ ಇದಾಗಿದೆ ಎಂದು ಅವರು ಹೇಳಿದ್ದಾರೆ. ALPಗಳ ನೇಮಕಾತಿ ಡ್ರೈವ್ ಪ್ರಸ್ತುತ ಜನವರಿ 20ರಿಂದ ಫೆಬ್ರವರಿ 19ರವರೆಗೆ ಅಪ್ಲಿಕೇಶನ್‌ಗಳಿಗೆ ತೆರೆದಿರುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.  


ಭಾರತದಲ್ಲಿ ರೈಲ್ವೆ ಜಾಲವನ್ನು ವಿಸ್ತರಿಸುವ ನಿಟ್ಟಿನಲ್ಲಿ ನುರಿತ ಸಿಬ್ಬಂದಿಗೆ ಬೇಡಿಕೆ ಹೆಚ್ಚಿದೆ. ALP ನೇಮಕಾತಿಯ ಜೊತೆಗೆ ತಾಂತ್ರಿಕ, ತಾಂತ್ರಿಕೇತರ ಮತ್ತು ಗುಂಪು ʼDʼ ವಿಭಾಗಗಳಲ್ಲಿ ಹೆಚ್ಚಿನ ಅವಕಾಶಗಳು ತೆರೆದುಕೊಳ್ಳುವ ನಿರೀಕ್ಷೆಗಳಿವೆ. ಇದು ದೇಶಾದ್ಯಂತ ಉದ್ಯೋಗಾಕಾಂಕ್ಷಿಗಳಿಗೆ ಹೊಸ ಭರವಸೆಯ ಕಿರಣವನ್ನು ನೀಡುತ್ತದೆ ಎಂದು ಸಚಿವರು ಹೇಳಿದ್ದಾರೆ. 


ಇದನ್ನೂ ಓದಿ: ಸಿದ್ದರಾಮಯ್ಯರಿಂದ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ವ್ಯರ್ಥ ಪ್ರಯತ್ನ: ಬಿಜೆಪಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.