RRB Recruitment 2024: ಭಾರತೀಯ ರೈಲ್ವೆ ಇಲಾಖೆಯ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 9,144 ಟೆಕ್ನಿಷಿಯನ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.


COMMERCIAL BREAK
SCROLL TO CONTINUE READING

ಇದೇ ಏಪ್ರಿಲ್ 8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಮಾರ್ಚ್‌ 9ರಿಂದಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಕೇಂದ್ರ ಸರ್ಕಾರಿ ನೌಕರಿ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: NCBS Recruitment 2024: ಬೆಂಗಳೂರಿನಲ್ಲಿ ಕ್ಲರ್ಕ್​ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿರಿ


ಹುದ್ದೆಯ ವಿವರ: ರೈಲ್ವೆ ಇಲಾಖೆಯ ನೇಮಕಾತಿ ಮಂಡಳಿಯಲ್ಲಿ  ಟೆಕ್ನಿಷಿಯನ್ ಗ್ರೇಡ್-1- 1,092 ಮತ್ತು ಟೆಕ್ನಿಷಿಯನ್ ಗ್ರೇಡ್-3- 8,052 ಒಟ್ಟು 9,144 ಟೆಕ್ನಿಷಿಯನ್​ ಹುದ್ದೆಗಳು ಖಾಲಿ ಇವೆ. 


ಶೈಕ್ಷಣಿಕ ಅರ್ಹತೆ: ರೈಲ್ವೆ ನೇಮಕಾತಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಫಿಜಿಕ್ಸ್​/ಎಲೆಕ್ಟ್ರಾನಿಕ್ಸ್​/ಕಂಪ್ಯೂಟರ್​ ಸೈನ್ಸ್/ಐಟಿ/ಇನ್​ಸ್ಟ್ರುಮೆಂಟೇಶನ್​​ನಲ್ಲಿ ಬಿ.ಎಸ್ಸಿ, ಡಿಪ್ಲೊಮಾ, ಬಿಇ/ಬಿ.ಟೆಕ್​​ ಪೂರ್ಣಗೊಳಿಸಿರಬೇಕು.


ಅರ್ಜಿ ಶುಲ್ಕ: SC/ST & ಮಹಿಳಾ ಅಭ್ಯರ್ಥಿಗಳಿಗೆ 250 ರೂ. ಮತ್ತು ಉಳಿದ ಎಲ್ಲಾ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕ ಪಾವತಿಸಬೇಕು.


ಉದ್ಯೋಗದ ಸ್ಥಳ: ಕರ್ನಾಟಕ ಸೇರಿದಂತೆ ಅಖಿಲ ಭಾರತ  


ವೇತನ: ಮಾಸಿಕ ₹19,900-₹29,200


ಆಯ್ಕೆ ಪ್ರಕ್ರಿಯೆ: ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅರ್ಜಿ ಸಲ್ಲಿಸಬಹುದು.


ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/03/2024 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್ 8 ಆಗಿರುತ್ತದೆ.


ಇದನ್ನೂ ಓದಿ: Post Office Scheme: ತೆರಿಗೆ ಮುಕ್ತ ಎಫ್ಡಿಗಿಂತ ಉತ್ತಮ ಬಡ್ಡಿ ಕೊಡುತ್ತೇ ಈ ಅಂಚೆ ಕಚೇರಿ ಯೋಜನೆ, ಮಕ್ಕಳ ಹೆಸರಿನಲ್ಲೂ ಖಾತೆ ತೆರೆಯಬಹುದು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.