ನವದೆಹಲಿ: ರೈಲ್ವೆ ನೇಮಕಾತಿ ಸೆಲ್ (RRC) ಪಶ್ಚಿಮ ರೈಲ್ವೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು RRC WR-rrc-wr.comನ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.


COMMERCIAL BREAK
SCROLL TO CONTINUE READING

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ನೀಡಿರುವ ಭಾರತೀಯ ರೈಲ್ವೆ ಇಲಾಖೆಯು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಗಳನ್ನು ಭರ್ತಿ ಮಾಡಲಾಗುವುದು ಎಂದು ಘೋಷಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಲಾಗಿದ್ದು, ಒಟ್ಟು 3,624 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದೆ.


ಇದನ್ನೂ ಓದಿ: Panipuri Video: ಬಾಯಿ ಚಪ್ಪರಿಸಿ ಗೋಲಗಪ್ಪಾ ತಿನ್ನೋ ಮುನ್ನ ಈ ವಿಡಿಯೋ ನೋಡಿ.. ಜನ್ಮದಲ್ಲೇ ಪಾನಿಪುರಿ ಹೆಸರೆತ್ತಲ್ಲ!


ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಇದೇ ತಿಂಗಳ 27ರಿಂದ ಪ್ರಾರಂಭವಾಗಲಿದೆ. ಅರ್ಜಿ ಸಲ್ಲಿಸಲು ಜುಲೈ 26 ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.


ಶೈಕ್ಷಣಿಕ ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಶೇ.50ರಷ್ಟು ಅಂಕಗಳೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಇನ್ನು ಸಂಬಂಧಿತ ಟ್ರೇಡ್‌ನಿಂದ ITI ಪ್ರಮಾಣಪತ್ರವನ್ನು ಪಡೆದಿರಬೇಕು. ಇದಲ್ಲದೆ ಜುಲೈ 26ಕ್ಕೆ ಅಭ್ಯರ್ಥಿಗಳ ವಯಸ್ಸು 15-24 ವರ್ಷಗಳಾಗಿರಬೇಕು.


ಇದನ್ನೂ ಓದಿ: Rahul Gandhi Marriage: 'ಗಡ್ಡ ಬಿಡಬೇಡಿ... ಮದುವೆ ಮಾಡ್ಕೊಳ್ಳಿ' ರಾಹುಲ್ ಗಾಂಧಿಗೆ ಸಲಹೆ ನೀಡಿದ ಲಾಲೂ ಯಾದವ್


ಅಭ್ಯರ್ಥಿಗಳ ಆಯ್ಕೆ: ಅಭ್ಯರ್ಥಿಗಳ ಆಯ್ಕೆಯು ಅರ್ಹತೆಯ ಆಧಾರದ ಮೇಲೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇತರೆ ಸಂಪೂರ್ಣ ವಿವರಗಳನ್ನು ನೀವು ಅಧಿಸೂಚನೆಯಲ್ಲಿ ನೋಡಬಹುದು.


ಅರ್ಜಿ ಶುಲ್ಕ: ಅಭ್ಯರ್ಥಿಗಳು100 ರೂ. ಅರ್ಜಿ ಶುಲ್ಕ ಪಾವತಿಸಬೇಕು. SC/ST/PWD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ಇಂಟರ್ನೆಟ್ ಬ್ಯಾಂಕ್ ಮೂಲಕ ಶುಲ್ಕವನ್ನ ಪಾವತಿಸಬೇಕು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.