ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡಿಸಿದ್ದು, ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ನೀಡಿರುವುದಕ್ಕೆ. ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 44,422 ಕೋಟಿ ರೂಪಾಯಿ ಮೀಸಲಿಟ್ಟಿದ್ದು, ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ.
''ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ಸಿ.ಎಸ್.ಆರ್. ಅನುದಾನದಡಿ, ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಆಯ್ದ ಶಾಲೆಗಳ ಉನ್ನತೀಕರಣ: 3 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ-ಗಣಕ ಕಾರ್ಯಕ್ರಮ. 10 ಕೋಟಿ ರೂ. ವೆಚ್ಚದಲ್ಲಿ ಮರು ಸಿಂಚನ ಕಾರ್ಯಕ್ರಮ; ಆಯ್ದ ಪ್ರೌಢ ಶಾಲೆಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ವಿಜ್ಞಾನ ಹಾಗೂ ಕಂಪ್ಯೂಟರ್ ಪ್ರಯೋಗಾಲಯ, ಇಂಟರ್ನೆಟ್ ಸೌಲಭ್ಯ ಒದಗಿಸಿರುವು ಖುಷಿ ತಂದಿದೆ ಎಂದು ಸಚಿವ ಮಧುಬಂಗಾರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ- Karnataka Budget 2024: ಖಾಲಿ ಇರುವ ಶಿಕ್ಷಕರ, ಉಪನ್ಯಾಸಕರ ನೇಮಕಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ ಘೋಷಣೆ
ಅಲ್ಲದೆ, ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ 2000 ಸರ್ಕಾರಿ ಪ್ರಾಥಮಿಕ ಶಾಲೆಗಳ ಪರಿವರ್ತನೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಹೊಸ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾರಂಭ, ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ರಾಜ್ಯದ 74 ಆದರ್ಶ ವಿದ್ಯಾಲಯಗಳ ಉನ್ನತೀಕರಣ ಮಾಡಿರುವುದು ಶಿಕ್ಷಣ ಇಲಾಖೆಗೆ ಹೆಚ್ಚಿನ ಬಲ ನೀಡಲಿದೆ. ಈ ಬಾರಿಯ ಬಜೆಟ್ ಉತ್ತಮವಾಗಿದೆ'' ಎಂದು ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಪ್ರತ್ರಿಕಾ ಪ್ರಕಟಣೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ- Karnataka Budget 2024: ವಸತಿರಹಿತರಿಗೆ ಸೂರು ಒದಗಿಸಲು ಈ ಆರ್ಥಿಕ ವರ್ಷದಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಭರವಸೆ
ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು..?:
ರಾಜ್ಯದ ಅಸ್ಮಿತೆ, ಸಂಸ್ಕೃತಿಗೆ ಅನುಗುಣವಾಗಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ನೇಮಕ ಮತ್ತು ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಉಪನ್ಯಾಸಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ಕರೆಂಟ್, ನಿರಂತರ ನೀರಿನ ಸೌಲಭ್ಯ ಒದಗಿಸಲಾಗುವುದು. ಉಚಿತ ವಿದ್ಯುತ್ಗೆ 25 ಕೋಟಿ ರೂ. ಮೀಸಲಿಡಲಾಗುವುದು. ಮಹಿಳಾ ಪಾಲಿಟೆಕ್ನಿಕ್ ಉನ್ನತೀಕರಣಕ್ಕೆ 30 ಕೋಟಿ ರೂ. ಮೀಸಲಿಡಲಾಗುವುದು. ರಾಜ್ಯದ 20 ಸಾವಿರ ಸೈನ್ಸ್ ವಿದ್ಯಾರ್ಥಿಗಳಿಗೆ NEET, JEE, CET ತರಬೇತಿಗೆ 10 ಕೋಟಿ ರೂ. ಅನುದಾನ ನೀಡಲಾಗುವುದು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ, ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂ. ಮೀಸಲಿಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಘೋಷಿಸಿದ್ದಾರೆ.
ಖಾಲಿ ಇರುವ ಶಿಕ್ಷಕರ, ಉಪನ್ಯಾಸಕರ ನೇಮಕಕ್ಕೆ ಕ್ರಮ:
ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಕ, ಉಪನ್ಯಾಸಕರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಬಜೆಟ್ನಲ್ಲಿ ಘೋಷಿಸಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ ನೀಡಲಾಗುವುದು. ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂ. ಮೀಸಲಿಡಲಾಗುವುದು. ಖಾಲಿ ಇರುವ ಶಿಕ್ಷಕರ, ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಅಂತಾ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.