ಅಂಚೆ ವಿಮೆ ಉತ್ಪನ್ನಗಳ ಮಾರಾಟ: ಪ್ರತಿನಿಧಿಗಳ ನಿಯುಕ್ತಿಗೆ ನೇರ ಸಂದರ್ಶನ

ಅಂಚೆ ಅಧೀಕ್ಷಕರು ಗದಗ ವಿಭಾಗ, ಗದಗ ಇವರು ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಪ್ರಸ್ತಾಪಿಸಿದ್ದು, ಫೆಬ್ರವರಿ 20ರಂದು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

Written by - Manjunath N | Last Updated : Feb 6, 2024, 11:57 PM IST
  • ಆಯ್ಕೆಯಾದ ಅಭ್ಯರ್ಥಿಗಳು ರೂ. 5000 ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ.
  • ಅಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮಿಷನ್ ನೀಡಲಾಗುವುದು ಹಾಗೂ ಯಾವುದೇ ನಿಗದಿತ ವೇತನ ಇರುವುದಿಲ್ಲ.
  • ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ/ ಸಂಸ್ಥೆ ಸಂಘಗಳ ಏಜೆಂಟ್ ಆಗಿರಬಾರದು.
 ಅಂಚೆ ವಿಮೆ ಉತ್ಪನ್ನಗಳ ಮಾರಾಟ: ಪ್ರತಿನಿಧಿಗಳ ನಿಯುಕ್ತಿಗೆ ನೇರ ಸಂದರ್ಶನ title=

ಕೊಪ್ಪಳ: ಅಂಚೆ ಅಧೀಕ್ಷಕರು ಗದಗ ವಿಭಾಗ, ಗದಗ ಇವರು ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಪ್ರಸ್ತಾಪಿಸಿದ್ದು, ಫೆಬ್ರವರಿ 20ರಂದು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಅರ್ಹತಾ ನಿಯಮಗಳು: ಅಭ್ಯರ್ಥಿಗಳು ಹತ್ತನೇ ತರಗತಿ ಉತ್ತೀರ್ಣರಾಗಿದ್ದು, ಕಡ್ಡಾಯವಾಗಿ 18 ವರ್ಷ ಮೇಲ್ಪಟ್ಟಿರಬೇಕು. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಸಲಹೆಗಾರರು ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ಮಾಜಿ ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡುಬಂದ ಯಾವುದೇ ಅಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು.

ಇದನ್ನೂ ಓದಿ: IND vs ENG: ಅಂತಿಮ ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟ! ಕೊಹ್ಲಿ ಸೇರಿ ಮೂವರು ಪ್ರಮುಖ ಆಟಗಾರರೇ ಇಲ್ಲ!

ಆಯ್ಕೆಯಾದ ಅಭ್ಯರ್ಥಿಗಳು ರೂ. 5000 ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ. ಅಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮಿಷನ್ ನೀಡಲಾಗುವುದು ಹಾಗೂ ಯಾವುದೇ ನಿಗದಿತ ವೇತನ ಇರುವುದಿಲ್ಲ. ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ/ ಸಂಸ್ಥೆ ಸಂಘಗಳ ಏಜೆಂಟ್ ಆಗಿರಬಾರದು.

ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ, ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊಂದಿಗೆ ಫೆ. 20ರಂದು ಬೆಳಿಗ್ಗೆ 10 ಗಂಟೆಗೆ ಗದಗ ಎಪಿಎಂಸಿ ಯಾರ್ಡ್, ಚೇಂಬರ್ ಆಫ್ ಕಾಮರ್ಸ್ ಎದುರುಗಡೆ ಇರುವ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಗದಗ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News