SBI Recruitment 2024: ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 68 ಆಫೀಸರ್, ಕ್ಲರಿಕಲ್ ಸ್ಟಾಫ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕ್ರೀಡಾಕೋಟಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 


COMMERCIAL BREAK
SCROLL TO CONTINUE READING

ಬಾಸ್ಕೆಟ್​ಬಾಲ್, ಕ್ರಿಕೆಟ್, ಫುಟ್ಬಾಲ್, ಹಾಕಿ, ವಾಲಿಬಾಲ್, ಕಬಡ್ಡಿ, ಟೇಬಲ್ ಟೆನ್ನಿಸ್ & ಬ್ಯಾಡ್ಮಿಂಟನ್ ಕ್ರೀಡಾಪಟುಗಳಿಗೆ ಇದು ಸುವರ್ಣಾಕಾಶವಾಗಿದೆ. ಆಗಸ್ಟ್ 14 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. 


ಇದನ್ನೂ ಓದಿ: ದೇವರನಾಡಲ್ಲಿ ಭೀಕರ ಭೂ ಕುಸಿತ ದುರಂತ


ಹುದ್ದೆಯ ಮಾಹಿತಿ: 17 ಆಫೀಸರ್ (ಕ್ರೀಡಾಪಟು) ಮತ್ತು 51 ಕ್ಲರಿಕಲ್ ಸ್ಟಾಫ್​ (ಕ್ರೀಡಾಪಟು) ಹುದ್ದೆಗಳು ಖಾಲಿ ಇವೆ. 


ವಿದ್ಯಾರ್ಹತೆ: ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ,  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.


ವಯೋಮಿತಿ: ಆಫೀಸರ್(ಕ್ರೀಡಾಪಟು) ಹುದ್ದೆಗೆ 21ರಿಂದ 30 ವರ್ಷ ಮತ್ತು ಕ್ಲರಿಕಲ್ ಸ್ಟಾಫ್ ಹುದ್ದೆಗೆ​ (ಕ್ರೀಡಾಪಟು) 20-28 ವರ್ಷ ವಯೋಮಿತಿ ಹೊಂದಿರಬೇಕು. 


ವಯೋಮಿತಿ ಸಡಿಲಿಕೆ: ಕ್ರೀಡಾಪಟು(SC/ST) ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಅರ್ಜಿ ಶುಲ್ಕ: SC/ST/PwBD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ ಮತ್ತು ಸಾಮಾನ್ಯ/EWS/OBC ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ 750 ರೂ. ಅರ್ಜಿ ಶುಲ್ಕ ಪಾವತಿಸಬೇಕು. 


ಆಯ್ಕೆ ಪ್ರಕ್ರಿಯೆ: ಶಾರ್ಟ್‌ಲಿಸ್ಟಿಂಗ್, ಮೌಲ್ಯಮಾಪನ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 


ವೇತನ: ಆಫೀಸರ್ (ಕ್ರೀಡಾಪಟು)ಗೆ ಮಾಸಿಕ ₹48,480-85,920 ಮತ್ತು ಕ್ಲರಿಕಲ್ ಸ್ಟಾಫ್​ (ಕ್ರೀಡಾಪಟು)ಗೆ ಮಾಸಿಕ ₹24,050- 64,480 ರೂ. ವೇತನ ನೀಡಲಾಗುತ್ತದೆ. 


ಉದ್ಯೋಗದ ಸ್ಥಳ: ಕರ್ನಾಟಕ ಸೇರಿದಂತೆ ಭಾರತದಾದ್ಯಂತ 


ಇದನ್ನೂ ಓದಿ: Daily GK Quiz: ಯಾವ ವರ್ಷದಲ್ಲಿ ಮಹಾತ್ಮ ಗಾಂಧಿಯವರು ಸಬರಮತಿ ಆಶ್ರಮವನ್ನು ಸ್ಥಾಪಿಸಿದರು?


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.