SBI Recruitment 2024: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಿರುದ್ಯೋಗಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಬರೋಬ್ಬರಿ 12,000 ಹೊಸ SBIನ ಜನರಲ್ ಕ್ಲರ್ಕ್ ಮತ್ತು ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಶೀಘ್ರವೇ ಅಧಿಕೃತ ಅಧಿಸೂಚನೆ ಹೊರಬೀಳಲಿದೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಮಾತನಾಡಿರುವ SBI ಬ್ಯಾಂಕ್ ಅಧ್ಯಕ್ಷ ದಿನೇಶ್ ಖರಾ, ಎಂಜಿನಿಯರಿಂಗ್ ಪದವೀಧರರಲ್ಲಿ ಕೇವಲ ಶೇ.85ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಐಟಿ ಇಲಾಖೆ ಮತ್ತು ಇತರ ಇಲಾಖೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಗಳನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. 


ಇದನ್ನೂ ಓದಿ: ಬಿಹಾರ: ಸರನ್‌ನಲ್ಲಿನ ಚುನಾವಣೋತ್ತರ ಹಿಂಸಾಚಾರದಲ್ಲಿ ಓರ್ವ ಸಾವು, ಇಬ್ಬರಿಗೆ ಗಾಯ


ಈ ನೇಮಕಾತಿಯಡಿ 3 ಸಾವಿರ POಗಳು ಮತ್ತು 8 ಸಾವಿರ ಸಹವರ್ತಿಗಳಿಗೆ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ತರಬೇತಿ ನೀಡಲಾಗುವುದು. ನಂತರ ವಿವಿಧ ವ್ಯವಹಾರ ಘಟಕಗಳಲ್ಲಿ ನೇಮಕ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. 


2025ರ ಆರ್ಥಿಕ ವರ್ಷದಲ್ಲಿ 12,000 ಪ್ರೊಬೇಷನರಿ ಅಧಿಕಾರಿಗಳು ಮತ್ತು ಸಹವರ್ತಿಗಳನ್ನು ನೇಮಿಸಿಕೊಳ್ಳುವ ಯೋಜನೆಯನ್ನು ಇದೇ ವೇಳೆ ಅವರು ಘೋಷಿಸಿದ್ದಾರೆ. ಬ್ಯಾಂಕಿಂಗ್‌ನಲ್ಲಿ ತಂತ್ರಜ್ಞಾನದ ಬೆಳೆಯುತ್ತಿರುವ ಪಾತ್ರವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಒತ್ತಿ ಹೇಳಿದ್ದಾರೆ.


ಇದನ್ನೂ ಓದಿ: 24 ಗಂಟೆಗಳ ಕಾಲ ಪ್ರಚಾರ ಮಾಡದಂತೆ ಬಿಜೆಪಿಯ ಅಭಿಜಿತ್ ಗಂಗೋಪಾಧ್ಯಾಯಗೆ ಚುನಾವಣಾ ಆಯೋಗ ನಿರ್ಬಂಧ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.