SBI Sarkari Naukri: ಭಾರತದ ಅತಿದೊಡ್ಡ ಸರ್ಕಾರಿ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಯಾವುದೇ ಲಿಖಿತ ಪರೀಕ್ಷೆ ಇಲ್ಲದೆಯೇ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ sbi.co.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. 


COMMERCIAL BREAK
SCROLL TO CONTINUE READING

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗಾಗಿ ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಡಿಸೆಂಬರ್ 12, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 65 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈ ಹುದ್ದೆಗಳಿಗೆ ಅರ್ಹತಾ ಮಾನದಂಡ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳನ್ನು ತಿಳಿಯಲು ಮುಂದೆ ಓದಿ...


ಅರ್ಹತಾ ಮಾನದಂಡಗಳು:
ಎಸ್‌ಬಿಐನಲ್ಲಿ  ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಅಧಿಕೃತ ಅಧಿಸೂಚನೆಯ ಮೂಲಕ ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಪರಿಶೀಲಿಸಬಹುದು. ಈ ನೇಮಕಾತಿ ಅಭಿಯಾನದ ಮೂಲಕ, ಖಾಲಿಯಿರುವ 65 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅದರಲ್ಲಿ 64  ಮ್ಯಾನೇಜರ್ ಹುದ್ದೆಗಳು ಮತ್ತು 1 ಸರ್ಕಲ್ ಅಡ್ವೈಸರ್ ಪೋಸ್ಟ್ ಆಗಿದೆ. 


ಇದನ್ನೂ ಓದಿ- NIOS ನೇಮಕಾತಿ 2022: ತಿಂಗಳಿಗೆ ರೂ.51,000 ವೇತನದೊಂದಿಗೆ ಸಲಹೆಗಾರರ ಉದ್ಯೋಗಗಳು!


ಆಯ್ಕೆ ಪ್ರಕ್ರಿಯೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಈ ಹುದ್ದೆಗಳಿಗೆ ಶಾರ್ಟ್‌ಲಿಸ್ಟಿಂಗ್ ಮತ್ತು  ಇಂಟರ್ಆಕ್ಟಿಂಗ್ ಮೂಲಕ ಆಯ್ಕೆ ಪ್ರಕ್ರಿಯೆಯು ನಡೆಯಲಿದೆ. ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆಯನ್ನು ನಡೆಸುವುದಿಲ್ಲ. ಕೆಲವು ಹುದ್ದೆಗಳಿಗೆ 100 ಅಂಕಗಳ ಮೌಲ್ಯವುಳ್ಳ ಸಂದರ್ಶನ ಇರಲಿದೆ. ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅವರೋಹಣ ಕ್ರಮದಲ್ಲಿ ಆಯ್ಕೆಗಾಗಿ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.


ವಯೋಮಿತಿ ಮತ್ತು ವೇತನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ  25 ವರ್ಷಗಳು ಮತ್ತು ಗರಿಷ್ಠ 62 ವರ್ಷಗಳು. ಮ್ಯಾನೇಜರ್ ಹುದ್ದೆಗಳಲ್ಲಿ ಉದ್ಯೋಗಕ್ಕೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ MMGS-III ವೇತನ ಶ್ರೇಣಿ ರೂ.63840-1990/ 5-73790-2220/ 2-78230 ಆಗಿರುತ್ತದೆ. ಇದೇ ವೇಳೆ ಸರ್ಕಲ್ ಅಡ್ವೈಸರ್ ಹುದ್ದೆಗೆ ಸಿಟಿಸಿ ಸಹಿತ ವಾರ್ಷಿಕ 19.50 ಲಕ್ಷ ರೂ. ನಿಗದಿಗೊಳಿಸಲಾಗಿದೆ.


ಇದನ್ನೂ ಓದಿ- Job Alert: ಕೃಷಿ ವಿವಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ


ಅರ್ಜಿ ಶುಲ್ಕ: 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ / OBC / EWS ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 750 ರೂ. SC/ST/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಅಂದರೆ ಅವರು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ.


ಅರ್ಜಿ ಶುಲ್ಕ ಪಾವತಿ ವಿಧಾನ: 
ಅಭ್ಯರ್ಥಿಗಳು ಬ್ಯಾಂಕ್‌ನ ವೃತ್ತಿ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಪಾವತಿ ಗೇಟ್‌ವೇ ಮೂಲಕ ಆನ್‌ಲೈನ್‌ನಲ್ಲಿ ಶುಲ್ಕವನ್ನು ಪಾವತಿಸಬೇಕು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.