NTROದಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ ! Scientist ಹುದ್ದೆಗೆ 1.77 ಲಕ್ಷ ವೇತನ

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್‌ಗಳಾದ ntro.gov.in ಅಥವಾ recruit-ndl.nielit.gov.in ಗೆ ಭೇಟಿ ನೀಡಬೇಕು.

Written by - Ranjitha R K | Last Updated : Oct 18, 2024, 04:25 PM IST
  • ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳು
  • NTRO ನೇಮಕಾತಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದು
NTROದಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ ! Scientist ಹುದ್ದೆಗೆ 1.77  ಲಕ್ಷ ವೇತನ

NTRO Scientist B Recruitment 2024: ಸೈನ್ಸ್  ಸ್ಟೂಡೆಂಟ್ಸ್ ಆಗಿದ್ದು, ಉತ್ತಮ ಉದ್ಯೋಗವನ್ನು ಹುಡುಕುತ್ತಿದ್ದರೆ ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳು ಹೊರಬಂದಿವೆ.ಇಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಅಭ್ಯರ್ಥಿಗಳಿಂದ ಈ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NTRO ನೇಮಕಾತಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಾದ ntro.gov.in ಅಥವಾ recruit-ndl.nielit.gov.inಗೆ ಭೇಟಿ ನೀಡಬೇಕು. 

Add Zee News as a Preferred Source

ಅರ್ಜಿಯ ಕೊನೆಯ ದಿನಾಂಕ:
ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (NTRO) ಅಕ್ಟೋಬರ್ 10 ರಿಂದ ಸೈಂಟಿಸ್ಟ್ ಬಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ನವೆಂಬರ್ 8 ರವರೆಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ : ನಾಳೆ UGC NET ಜೂನ್ 2024 ಫಲಿತಾಂಶ ಪ್ರಕಟ ! ರಿಸಲ್ಟ್ ಇಲ್ಲಿ ಚೆಕ್ ಮಾಡಿಕೊಳ್ಳಿ

ಖಾಲಿ ಇರುವ ಹುದ್ದೆಗಳ ಸಂಖ್ಯೆ :
ಎನ್‌ಟಿಆರ್‌ಒ ಸೈಂಟಿಸ್ಟ್ ನೇಮಕಾತಿ 204 ಅಭಿಯಾನವನ್ನು ಮ್ಯಾಟ್ರಿಕ್ಸ್ ಲೆವೆಲ್-10 ರಲ್ಲಿ ವೇತನ ಶ್ರೇಣಿಗಾಗಿ ನಡೆಸಲಾಗುತ್ತಿದೆ.ಇದರ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳನ್ನು ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ವಿಜ್ಞಾನಿ ಬಿ  ಹುದ್ದೆಗೆ ನೇಮಕ ಮಾಡಲಾಗುತ್ತಿದೆ. ಒಟ್ಟು 75 ಹುದ್ದೆಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ. 

ಅಗತ್ಯ ಅರ್ಹತೆ:
ಎನ್‌ಟಿಆರ್‌ಒದಲ್ಲಿ ಸೈಂಟಿಸ್ಟ್ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.ಈ ನಿಟ್ಟಿನಲ್ಲಿ ಹೆಚ್ಚಿನ ವಿವರಗಳನ್ನು ತಿಳಿಯಲು, ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಪರಿಶೀಲಿಸಬಹುದು.

ವಯೋಮಿತಿ:
ಈ ಹುದ್ದೆಗಳಿಗೆ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 30 ವರ್ಷಗಳಿಗೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದ್ದು, ಕೇಂದ್ರ ಹೊರಡಿಸಿರುವ ಸೂಚನೆಗಳ ಪ್ರಕಾರ ಇದು ಅನ್ವಯವಾಗಲಿದೆ.

ಇದನ್ನೂ ಓದಿ : ದೊಡ್ಡ ವೇತನದ ನೌಕರಿ ಬೇಕಿದ್ದರೆ ಈ ಕೋರ್ಸ್ ಗಳನ್ನೇ ಆಯ್ಕೆ ಮಾಡಿಕೊಳ್ಳಿ ! ಪದವಿ ಮುಗಿಯುತ್ತಿದ್ದ ಹಾಗೆ ಕೆಲಸ ಗ್ಯಾರಂಟಿ

ಸಾಮಾನ್ಯ ಕೇಂದ್ರ ನಾಗರಿಕ ಸೇವೆ, ಗ್ರೂಪ್ 'ಎ' (ಗೆಜೆಟೆಡ್, ನಾನ್ ಮಿನಿಸ್ಟ್ರೀಯಲ್) - ಲೆವೆಲ್-10 ಆಫ್ ಪೇ ಮ್ಯಾಟ್ರಿಕ್ಸ್ (ರೂ. 56,100 - 1,77,500)

ನೇಮಕಾತಿ ಅಧಿಸೂಚನೆಯನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ :

ಆಯ್ಕೆ ಪ್ರಕ್ರಿಯೆ ಹೇಗೆ ? : 
ಎನ್ ಟಿಆರ್ ಓದಲ್ಲಿ ಸೈಂಟಿಸ್ಟ್ ಬಿ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳ ಅಂತಿಮ ಆಯ್ಕೆ ನಡೆಯಲಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News