NTRO Scientist B Recruitment 2024: ಸೈನ್ಸ್  ಸ್ಟೂಡೆಂಟ್ಸ್ ಆಗಿದ್ದು, ಉತ್ತಮ ಉದ್ಯೋಗವನ್ನು ಹುಡುಕುತ್ತಿದ್ದರೆ ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳು ಹೊರಬಂದಿವೆ.ಇಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಅಭ್ಯರ್ಥಿಗಳಿಂದ ಈ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NTRO ನೇಮಕಾತಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಾದ ntro.gov.in ಅಥವಾ recruit-ndl.nielit.gov.inಗೆ ಭೇಟಿ ನೀಡಬೇಕು. 


COMMERCIAL BREAK
SCROLL TO CONTINUE READING

ಅರ್ಜಿಯ ಕೊನೆಯ ದಿನಾಂಕ:
ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (NTRO) ಅಕ್ಟೋಬರ್ 10 ರಿಂದ ಸೈಂಟಿಸ್ಟ್ ಬಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ನವೆಂಬರ್ 8 ರವರೆಗೆ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ : ನಾಳೆ UGC NET ಜೂನ್ 2024 ಫಲಿತಾಂಶ ಪ್ರಕಟ ! ರಿಸಲ್ಟ್ ಇಲ್ಲಿ ಚೆಕ್ ಮಾಡಿಕೊಳ್ಳಿ


ಖಾಲಿ ಇರುವ ಹುದ್ದೆಗಳ ಸಂಖ್ಯೆ :
ಎನ್‌ಟಿಆರ್‌ಒ ಸೈಂಟಿಸ್ಟ್ ನೇಮಕಾತಿ 204 ಅಭಿಯಾನವನ್ನು ಮ್ಯಾಟ್ರಿಕ್ಸ್ ಲೆವೆಲ್-10 ರಲ್ಲಿ ವೇತನ ಶ್ರೇಣಿಗಾಗಿ ನಡೆಸಲಾಗುತ್ತಿದೆ.ಇದರ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳನ್ನು ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ವಿಜ್ಞಾನಿ ಬಿ  ಹುದ್ದೆಗೆ ನೇಮಕ ಮಾಡಲಾಗುತ್ತಿದೆ. ಒಟ್ಟು 75 ಹುದ್ದೆಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ. 


ಅಗತ್ಯ ಅರ್ಹತೆ:
ಎನ್‌ಟಿಆರ್‌ಒದಲ್ಲಿ ಸೈಂಟಿಸ್ಟ್ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.ಈ ನಿಟ್ಟಿನಲ್ಲಿ ಹೆಚ್ಚಿನ ವಿವರಗಳನ್ನು ತಿಳಿಯಲು, ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಪರಿಶೀಲಿಸಬಹುದು.


ವಯೋಮಿತಿ:
ಈ ಹುದ್ದೆಗಳಿಗೆ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 30 ವರ್ಷಗಳಿಗೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದ್ದು, ಕೇಂದ್ರ ಹೊರಡಿಸಿರುವ ಸೂಚನೆಗಳ ಪ್ರಕಾರ ಇದು ಅನ್ವಯವಾಗಲಿದೆ.


ಇದನ್ನೂ ಓದಿ : ದೊಡ್ಡ ವೇತನದ ನೌಕರಿ ಬೇಕಿದ್ದರೆ ಈ ಕೋರ್ಸ್ ಗಳನ್ನೇ ಆಯ್ಕೆ ಮಾಡಿಕೊಳ್ಳಿ ! ಪದವಿ ಮುಗಿಯುತ್ತಿದ್ದ ಹಾಗೆ ಕೆಲಸ ಗ್ಯಾರಂಟಿ


ಸಾಮಾನ್ಯ ಕೇಂದ್ರ ನಾಗರಿಕ ಸೇವೆ, ಗ್ರೂಪ್ 'ಎ' (ಗೆಜೆಟೆಡ್, ನಾನ್ ಮಿನಿಸ್ಟ್ರೀಯಲ್) - ಲೆವೆಲ್-10 ಆಫ್ ಪೇ ಮ್ಯಾಟ್ರಿಕ್ಸ್ (ರೂ. 56,100 - 1,77,500)


ನೇಮಕಾತಿ ಅಧಿಸೂಚನೆಯನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ :


ಆಯ್ಕೆ ಪ್ರಕ್ರಿಯೆ ಹೇಗೆ ? : 
ಎನ್ ಟಿಆರ್ ಓದಲ್ಲಿ ಸೈಂಟಿಸ್ಟ್ ಬಿ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳ ಅಂತಿಮ ಆಯ್ಕೆ ನಡೆಯಲಿದೆ.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.