2nd PUC Result 2024 Karnataka: ದ್ವಿತೀಯ ಪಿಯುಸಿ ಫಲಿತಾಂಶ, ಆನ್‌ಲೈನ್‌ನಲ್ಲಿ ಈ ರೀತಿ ರಿಸಲ್ಟ್ ಚೆಕ್ ಮಾಡಿ

Karnataka PUC Results 2024: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ವಿದ್ಯಾರ್ಥಿಗಳು karresults.nic.in ನಲ್ಲಿ ಅಂಕಪಟ್ಟಿಗಳನ್ನು ಡೌನ್‌ಲೋಡ್ ಮಾಡಬಹುದು. ಆನ್‌ಲೈನ್‌ನಲ್ಲಿ ರಿಸಲ್ಟ್ ಚೆಕ್ ಮಾಡುವ  ಸುಲಭ ವಿಧಾನ ಇಲ್ಲಿದೆ. 

Written by - Yashaswini V | Last Updated : Apr 10, 2024, 10:34 AM IST
  • ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ಪರೀಕ್ಷೆ
  • ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು
  • ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಇಂದು ಬೆಳಗ್ಗೆ 11 ಗಂಟೆಗೆ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟ
2nd PUC Result 2024 Karnataka:  ದ್ವಿತೀಯ ಪಿಯುಸಿ ಫಲಿತಾಂಶ, ಆನ್‌ಲೈನ್‌ನಲ್ಲಿ ಈ ರೀತಿ ರಿಸಲ್ಟ್ ಚೆಕ್ ಮಾಡಿ  title=

Karnataka PUC Results 2024: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಇಂದು ದ್ವಿತೀಯ ಪಿಯುಸಿ ಫಲಿತಾಂಶ 2024ಅನ್ನು ಪ್ರಕಟಿಸಿದೆ. ಏಪ್ರಿಲ್ 10, 2024, ಬೆಳಿಗ್ಗೆ 10:00ಗಂಟೆಗೆ ಪತ್ರಿಕಾಗೋಷ್ಠಿ ಮೂಲಕ ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಿದೆ.
 
2024ರ ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ವಿಜ್ಞಾನ/ಕಲೆ/ವಾಣಿಜ್ಯ ವಿಭಾಗಗಳಿಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ (Second PUC Exam) ಈ ವರ್ಷ, ರಾಜ್ಯದಾದ್ಯಂತ  1,124 ಕೇಂದ್ರಗಳಲ್ಲಿ 6,81,079 ಲಕ್ಷ ವಿದ್ಯಾರ್ಥಿಗಳು  ಹಾಜರಾಗಿದ್ದರು. ಇವರಲ್ಲಿ ಒಟ್ಟು 5,52, 690 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಇಲಾಖೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದೆ.

ಇದನ್ನೂ ಓದಿ-   Railway Jobs: ಹುಬ್ಬಳ್ಳಿಯಲ್ಲಿ ತಿಂಗಳಿಗೆ 2.80 ಲಕ್ಷ ಸಂಬಳ ನೀಡುವ ರೈಲ್ವೆ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ

ಇಂದು ಬೆಳಿಗ್ಗೆ ಬೆಳಿಗ್ಗೆ 11 ಗಂಟೆಗೆ  karresults.nic.in. ಅಧಿಕೃತ ವೆಬ್‌ಸೈಟ್‌ನಲ್ಲಿ   ಮಾರ್ಕ್‌ಶೀಟ್ ಡೌನ್‌ಲೋಡ್ ಮಾಡಬಹುದು ಎಂದು ಕೆಎಸ್‌ಇಎಬಿ (KSEAB) ತಿಳಿಸಿದೆ. 

ಇದನ್ನೂ ಓದಿ- GK Quiz: ಯಾವ ದೇಶದ ಜನರು ಮಂಜುಗಡ್ಡೆಗಳ ಮನೆಯಲ್ಲಿ ವಾಸಿಸುತ್ತಾರೆ?

ದ್ವಿತೀಯ ಪಿಯುಸಿ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ: 
ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು (Second PUC Results)  ಪರಿಶೀಲಿಸಲು ಮತ್ತು ಮಾರ್ಕ್ ಶೀಟ್ ಅನ್ನು ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ...
* ಮೊದಲಿಗೆ  karresults.nic.in. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
* ಮುಖಪುಟದಲ್ಲಿ, ಫಲಿತಾಂಶದ ಲಿಂಕ್ ಅನ್ನು ಕ್ಲಿಕ್ ಮಾಡಿ
* ನೋಂದಣಿ ಸಂಖ್ಯೆಯನ್ನು ಸಲ್ಲಿಸಿ ಮತ್ತು ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆಮಾಡಿ 
* ಹೊಸ ಪುಟದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶಗಳು ಎಂದು ಕಾಣಿಸಿಕೊಳ್ಳುತ್ತದೆ 
* ಇಲ್ಲಿ ಅಂಕಪಟ್ಟಿಯನ್ನು ವೀಕ್ಷಿಸಬಹುದು, ಭವಿಷ್ಯದ ಬಳಕೆಗಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News