Karnataka PUC Results 2024: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಇಂದು ದ್ವಿತೀಯ ಪಿಯುಸಿ ಫಲಿತಾಂಶ 2024ಅನ್ನು ಪ್ರಕಟಿಸಿದೆ. ಏಪ್ರಿಲ್ 10, 2024, ಬೆಳಿಗ್ಗೆ 10:00ಗಂಟೆಗೆ ಪತ್ರಿಕಾಗೋಷ್ಠಿ ಮೂಲಕ ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಿದೆ.
 
2024ರ ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ವಿಜ್ಞಾನ/ಕಲೆ/ವಾಣಿಜ್ಯ ವಿಭಾಗಗಳಿಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ (Second PUC Exam) ಈ ವರ್ಷ, ರಾಜ್ಯದಾದ್ಯಂತ  1,124 ಕೇಂದ್ರಗಳಲ್ಲಿ 6,81,079 ಲಕ್ಷ ವಿದ್ಯಾರ್ಥಿಗಳು  ಹಾಜರಾಗಿದ್ದರು. ಇವರಲ್ಲಿ ಒಟ್ಟು 5,52, 690 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಇಲಾಖೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ-   Railway Jobs: ಹುಬ್ಬಳ್ಳಿಯಲ್ಲಿ ತಿಂಗಳಿಗೆ 2.80 ಲಕ್ಷ ಸಂಬಳ ನೀಡುವ ರೈಲ್ವೆ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ


ಇಂದು ಬೆಳಿಗ್ಗೆ ಬೆಳಿಗ್ಗೆ 11 ಗಂಟೆಗೆ  karresults.nic.in. ಅಧಿಕೃತ ವೆಬ್‌ಸೈಟ್‌ನಲ್ಲಿ   ಮಾರ್ಕ್‌ಶೀಟ್ ಡೌನ್‌ಲೋಡ್ ಮಾಡಬಹುದು ಎಂದು ಕೆಎಸ್‌ಇಎಬಿ (KSEAB) ತಿಳಿಸಿದೆ. 


ಇದನ್ನೂ ಓದಿ- GK Quiz: ಯಾವ ದೇಶದ ಜನರು ಮಂಜುಗಡ್ಡೆಗಳ ಮನೆಯಲ್ಲಿ ವಾಸಿಸುತ್ತಾರೆ?


ದ್ವಿತೀಯ ಪಿಯುಸಿ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ: 
ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು (Second PUC Results)  ಪರಿಶೀಲಿಸಲು ಮತ್ತು ಮಾರ್ಕ್ ಶೀಟ್ ಅನ್ನು ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ...
* ಮೊದಲಿಗೆ  karresults.nic.in. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
* ಮುಖಪುಟದಲ್ಲಿ, ಫಲಿತಾಂಶದ ಲಿಂಕ್ ಅನ್ನು ಕ್ಲಿಕ್ ಮಾಡಿ
* ನೋಂದಣಿ ಸಂಖ್ಯೆಯನ್ನು ಸಲ್ಲಿಸಿ ಮತ್ತು ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆಮಾಡಿ 
* ಹೊಸ ಪುಟದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶಗಳು ಎಂದು ಕಾಣಿಸಿಕೊಳ್ಳುತ್ತದೆ 
* ಇಲ್ಲಿ ಅಂಕಪಟ್ಟಿಯನ್ನು ವೀಕ್ಷಿಸಬಹುದು, ಭವಿಷ್ಯದ ಬಳಕೆಗಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.