CM Siddaramaiah: ಸೋಷಿಯಲ್ ಮೀಡಿಯಾ ಪೋಸ್ಟ್ ಕಂಡು 24ಗಂಟೆಗಳ ಒಳಗೆ ಕುರಿ ಕಾಯುತ್ತಿದ್ದ 11 ವರ್ಷದ ಬಾಲಕನನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲೆಗೆ ಮರಳುವಂತೆ ಮಾಡಿದ್ದಾರೆ. 


COMMERCIAL BREAK
SCROLL TO CONTINUE READING

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ 11 ವರ್ಷದ ಬಾಲಕ ಯೋಗೇಶ್, ಓದುವ ವಯಸ್ಸಿನಲ್ಲಿ ಶಾಲೆ ತೊರೆದು ಕುರಿ ಕಾಯುವ ಕೆಲಸ ಮಾಡುತ್ತಿದ್ದ. ಕಳೆದೆರಡು ವರ್ಷಗಳಿಂದ ಇದನ್ನೇ ಕಾಯಕವಾಗಿಸಿಕೊಂಡಿದ್ದ ಯೋಗೇಶ್ ಬಗ್ಗೆ ಸಾಮಾಜಿಕ ಬಳಕೆದಾರರೊಬ್ಬರು ಮಾಹಿತಿ ನೀಡಿದ್ದರು. 


ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು: ಸಿಎಂ ಸಿದ್ದರಾಮಯ್ಯ


ಈ ಟ್ವಿಟ್ಟರ್ ಅನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಟ್ವೀಟ್ ಮಾಡಿದ 24 ಗಂಟೆಗಳ ಒಳಗೆ 11 ವರ್ಷದ ಬಾಲಕ ಯೋಗೇಶ್ ನನ್ನು ಶಾಲೆಗೆ ಮರಳಿಸುವಲ್ಲಿ ಯಶಸ್ವಿಯಾಗಿದ್ದಾರೆ. 


ಇನ್ನೂ ಈ ಕುರಿತಂತೆ ಸ್ವತಃ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಬಾಲ್ಯದ ಅನುಭವವನ್ನು ಮೆಲುಕು ಹಾಕಿದ್ದು, ಈ ರೀತಿ ಬರೆದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕು ಬಸಾಪುರದ ಯೋಗೇಶ್‌ ಎಂಬ ಬಾಲಕನನ್ನು ಆತನ ತಂದೆ ತಾಯಿ ಒತ್ತಾಯಪೂರ್ವಕವಾಗಿ ಶಾಲೆ ಬಿಡಿಸಿ ಕಳೆದ 2 ವರ್ಷದಿಂದ ಕುರಿ ಮೇಯಿಸಲು ತೊಡಗಿಸಿದ್ದರು. ಈ ವಿಚಾರವು ಸ್ಥಳೀಯರೊಬ್ಬರಿಂದ ನಮ್ಮ ಗಮನಕ್ಕೆ ಬಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಬಾಲಕನ ಮನೆಗೆ ಕಳುಹಿಸಿ, ಆತನ ತಂದೆ ತಾಯಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಿ, ಕೇವಲ 24 ಗಂಟೆಗಳ ಒಳಗೆ ಬಾಲಕನನ್ನು ಶಾಲೆಗೆ ಸೇರ್ಪಡೆ ಮಾಡಿಸಲಾಗಿದೆ. ಬಡತನದ ಕಾರಣಕ್ಕೆ ಶಿಕ್ಷಣದಿಂದ ವಂಚಿತನಾಗಿದ್ದ ಯೋಗೇಶ್‌ ಈಗ ಇತರ ಮಕ್ಕಳಂತೆ ಶಾಲೆಯಲ್ಲಿ ಕಲಿಯುತ್ತಾ, ನಲಿಯುತ್ತಾ ಉಜ್ವಲ ಭವಿಷ್ಯದೆಡೆಗೆ ಹೆಜ್ಜೆ ಹಾಕುತ್ತಿದ್ದಾನೆ. 


ವಿದ್ಯೆ ಕಲಿತು ಜಾತಿವಾದಿಗಳಾದರೆ ಪ್ರಯೋಜನವಿಲ್ಲ: ಸಿಎಂ ಸಿದ್ದರಾಮಯ್ಯ


ಬಾಲ್ಯದಲ್ಲಿ ನಾನು ಕೂಡ ಯೋಗೇಶ್‌ ನಂತೆ ಶಾಲೆಯಿಂದ ವಂಚಿತನಾಗಿದ್ದೆ, ರಾಜಪ್ಪ ಮೇಸ್ಟ್ರು ನನ್ನನ್ನು ನೇರವಾಗಿ 5ನೇ ತರಗತಿಗೆ ದಾಖಲಾತಿ ಮಾಡಿ ಶಿಕ್ಷಣ ಸಿಗುವಂತೆ ಮಾಡಿದ್ದರಿಂದ ಇಂದು ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ. ಮರಳಿ ಶಿಕ್ಷಣದತ್ತ ಮುಖಮಾಡಿರುವ ಈ ಬಾಲಕನ ಭವಿಷ್ಯವೂ ಉಜ್ವಲವಾಗಲಿ ಎಂಬ ಹಾರೈಕೆ ನನ್ನದು. ಇಂತಹ ಸಾರ್ವಜನಿಕ ಹಿತಾಸಕ್ತಿಯ ಸಮಸ್ಯೆಗಳು ನಿಮಗೂ ಕಂಡು ಬಂದರೆ ನಮ್ಮ ಕಚೇರಿಯ @osd_cmkarnataka ಟ್ವಿಟರ್ ಖಾತೆಯನ್ನು ಸಂಪರ್ಕಿಸಿ ಎಂದಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.