ಸಾಫ್ಟ್ ಟಾಯ್ಸ್, ಕೃತಕ ಆಭರಣಗಳ ತಯಾರಿಕೆ ತರಬೇತಿ: ಅರ್ಜಿ ಆಹ್ವಾನ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಗ್ರಾಮೀಣ ಭಾಗದ ಆಸಕ್ತರಿಗೆ 13 ದಿನಗಳ ಸಾಫ್ಟ್ ಟಾಯ್ಸ್ (ಮೃಧು ಆಟಿಕೆ) ತಯಾರಿಕೆ ಮತ್ತು ಕೃತಕ ಆಭರಣಗಳ ತಯಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಗ್ರಾಮೀಣ ಭಾಗದ ಆಸಕ್ತರಿಗೆ 13 ದಿನಗಳ ಸಾಫ್ಟ್ ಟಾಯ್ಸ್ (ಮೃಧು ಆಟಿಕೆ) ತಯಾರಿಕೆ ಮತ್ತು ಕೃತಕ ಆಭರಣಗಳ ತಯಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ 45 ವರ್ಷ ಒಳಗಿನವರಾಗಿರಬೇಕು. ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅರ್ಜಿ ಸಲ್ಲಿಸಲಿಚ್ಛೀಸುವ ಆಸಕ್ತರು ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ರೇಷನ್ ಕಾರ್ಡ್ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಸೈಜ್ ಮೂರು ಫೋಟೋ, ಮಾರ್ಕ್ಸಕಾರ್ಡ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ದೂ.ಸಂ: 08539-231038, ಮೊ.ಸಂ: 9483618178, 9481085217 & 7259073827 ಇಲ್ಲಿಗೆ ಸಲ್ಲಿಸಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿ ಉಚಿತವಾಗಿ ನೀಡಲಾಗುವುದು. ತರಬೇತಿಗಾಗಿ ಜುಲೈ 03ರಂದು ಸಂದರ್ಶನ ನಡೆಯಲಿದ್ದು, ಜುಲೈ 04ರಿಂದ ತರಬೇತಿ ಪ್ರಾರಂಭವಾಗಲಿವೆ ಎಂದು ಕೊಪ್ಪಳ ಎಸ್‌ಬಿಐ ಆರ್‌ಸಿಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.