ಬೆಂಗಳೂರು: ನೈಋತ್ಯ ರೈಲ್ವೆಯಲ್ಲಿ ಖಾಲಿ ಇರುವ 904 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 2 ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆನ್ಲೈನ್ ಮೋಡ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಪೋಸ್ಟಿಂಗ್ ನೀಡಲಾಗುವುದು.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಪೋಸ್ಟ್ ಕುರಿತ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬೇಕು. ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ವಿವಿಧ ರಾಜ್ಯಗಳ ಪಕ್ಷದ ಹೊಸ ಮುಖ್ಯಸ್ಥರನ್ನು ನೇಮಿಸಿದ ಬಿಜೆಪಿ
ಹುದ್ದೆಯ ಹೆಸರು: ಅಪ್ರೆಂಟಿಸ್
ಪೋಸ್ಟ್ ದಿನಾಂಕ: 03/07/2023
ಖಾಲಿ ಹುದ್ದೆಗಳ ಸಂಖ್ಯೆ: 904
ಸ್ಥಳ: ಹುಬ್ಬಳ್ಳಿ , ಬೆಂಗಳೂರು , ಮೈಸೂರು
ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03/07/2023
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02/08/2023
ಅಪ್ರೆಂಟಿಸ್ ಹುದ್ದೆಗಳ ವಿವರ:
ವಿಭಾಗದ ಹೆಸರು | ಹುದ್ದೆಗಳ ಸಂಖ್ಯೆ |
ಹುಬ್ಬಳ್ಳಿ ವಿಭಾಗ | 237 |
ಗಾಡಿ ದುರಸ್ತಿ ಕಾರ್ಯಾಗಾರ, ಹುಬ್ಬಳ್ಳಿ | 217 |
ಬೆಂಗಳೂರು ವಿಭಾಗ | 230 |
ಮೈಸೂರು ವಿಭಾಗ | 177 |
ಕೇಂದ್ರ ಕಾರ್ಯಾಗಾರ, ಮೈಸೂರು | 43 |
ಒಟ್ಟು | 904 |
ವಿದ್ಯಾರ್ಹತೆ: ನೈಋತ್ಯ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ/ಬೋರ್ಡ್ನಿಂದ 10ನೇ ತರಗತಿ, ITI, NTC ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ನೈಋತ್ಯ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ವಯಸ್ಸು ಆಗಸ್ಟ್ 2, 2023ಕ್ಕೆ 15 ವರ್ಷಗಳು ಮತ್ತು ಗರಿಷ್ಠ 24 ವರ್ಷಗಳನ್ನು ಮೀರಬಾರದು. SC/ST ಅಭ್ಯರ್ಥಿಗಳಿಗೆ 5 ವರ್ಷ, OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು PwD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಇದನ್ನೂ ಓದಿ: "ನನ್ನ ಸಿದ್ಧಾಂತಕ್ಕೆ ದ್ರೋಹ ಮಾಡಿದವರು ನನ್ನ ಫೋಟೋವನ್ನು ಬಳಸುವಂತಿಲ್ಲ"-ಶರದ್ ಪವಾರ್
ಅರ್ಜಿ ಶುಲ್ಕ: SC/ST/PwBD/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ. ಇತರೆ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಪೇ ಸ್ಕೇಲ್: ಮೆರಿಟ್ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ಮಾಸಿಕ ಸ್ಟೈಫಂಡ್ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ www.rrchubli.inಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವಾಗ ನೀವು ಯಾವುದೇ ಸಮಸ್ಯೆ ಎದುರಿಸಿದರೆ ಇಮೇಲ್ ಐಡಿ swractapp2223@gmail.comಗೆ ಮೇಲ್ ಮಾಡಬಹುದಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.