SSC Job Alert: 3,712 ವಿವಿಧ ಹುದ್ದೆಗಳಿಗೆ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿ

SSC Recruitment 2024: SSC CHSL ಶ್ರೇಣಿ -1ರ ಪರೀಕ್ಷೆಯನ್ನು ಜೂನ್-ಜುಲೈನಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಹೆಚ್ಚಿನ ವಿವರಗಳನ್ನು ಪ್ರಕಟಿಸಲಾಗುತ್ತದೆ. ಶ್ರೇಣಿ -1ರ ಪರೀಕ್ಷೆಯು ಬಹು ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಇದರಲ್ಲಿ ಪಾಸಾದ ಅಭ್ಯರ್ಥಿಗಳು ಶ್ರೇಣಿ -2ರ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ. ​

Written by - Puttaraj K Alur | Last Updated : Apr 9, 2024, 10:59 PM IST
  • ಸ್ಟಾಫ್ ಸೆಲೆಕ್ಷನ್ ಕಮಿಷನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ
  • SSC CHSL ಪರೀಕ್ಷೆಗಾಗಿ ಆನ್ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭಿಸಲಾಗಿದೆ
  • ಈ ನೇಮಕಾತಿಯಡಿ ಒಟ್ಟು 3,712 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ
SSC Job Alert: 3,712 ವಿವಿಧ ಹುದ್ದೆಗಳಿಗೆ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿ   title=
SSC Recruitment 2024

Staff Selection Commission Recruitment 2024: ಸ್ಟಾಫ್ ಸೆಲೆಕ್ಷನ್ ಕಮಿಷನ್(SSC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. SSC ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್(CHSL) ಪರೀಕ್ಷೆಗಾಗಿ ಆನ್ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭಿಸಿದೆ.

ಲೋವರ್ ಡಿವಿಷನ್ ಕ್ಲರ್ಕ್(LDC)/ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್(GSA), ಪೋಸ್ಟಲ್ ಅಸಿಸ್ಟೆಂಟ್(PA)/ಸಾರ್ಟಿಂಗ್ ಅಸಿಸ್ಟೆಂಟ್(SA) ಮತ್ತು ಡಾಟಾ ಎಂಟ್ರಿ ಆಪರೇಟರ್ಸ್(DEO) ಸೇರಿದಂತೆ ಒಟ್ಟು 3,712 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು https://ssc.gov.in/candidate-portal/one-time-registration/home-page ವೆಬ್‌ಸೈಟ್‌ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ ರಾಜ್ ಠಾಕ್ರೆ ನೇತೃತ್ವದ ಎಂಎನ್ಎಸ್ ಪಾರ್ಟಿ...!

ಅರ್ಜಿ ಸಲ್ಲಿಸುವುದು ಹೇಗೆ?

  • SSCಯ ಒನ್ ಟೈಮ್ ರಿಜಿಸ್ಟ್ರೇಷನ್(OTR) ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಿ.
  • ನಿಮ್ಮ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ಬಳಸಿ ಲಾಗಿನ್ ಮಾಡಿ 
  • ನಿಮ್ಮ ಶೈಕ್ಷಣಿಕ ಮತ್ತು ವೈಯಕ್ತಿಕ ವಿವರಗಳೊಂದಿಗೆ ಆನ್ಲೈನ್ ಅರ್ಜಿ ನಮೂನೆ ಭರ್ತಿ ಮಾಡಿ.
  • ಕನ್ನಡಕ ಅಥವಾ ಟೋಪಿ ಇಲ್ಲದ ಸ್ಪಷ್ಟ ಛಾಯಾಚಿತ್ರ ಅಪ್ಲೋಡ್ ಮಾಡಿ.
  • ನಮೂದಿಸಿದ ವಿವರಗಳನ್ನು ಪರಿಶೀಲಿಸಿ ಮತ್ತು ಅರ್ಜಿಯನ್ನು Submit ಮಾಡಿ.
  • ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಬೇಕು.
  • ನಿಮ್ಮ ದಾಖಲೆಗಳಿಗಾಗಿ ಅರ್ಜಿ ನಮೂನೆಯ ಪ್ರತಿಯನ್ನು ಪ್ರಿಂಟ್‌ ತೆಗೆದುಕೊಳ್ಳಿರಿ.

ಅರ್ಜಿ ಶುಲ್ಕ: ಮಹಿಳೆಯರು, SC/ST, ಅಂಗವಿಕಲರು ಮತ್ತು ಮಾಜಿ ಸೈನಿಕರು (ESM) ಹೊರತುಪಡಿಸಿ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. 

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ 19,900 ರೂ.ನಿಂದ 92,300 ರೂ.ವರೆಗೆ ವೇತನ ನೀಡಲಾಗುತ್ತದೆ.

SSC CHSL ಶ್ರೇಣಿ -1ರ ಪರೀಕ್ಷೆಯನ್ನು ಜೂನ್-ಜುಲೈನಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಹೆಚ್ಚಿನ ವಿವರಗಳನ್ನು ಪ್ರಕಟಿಸಲಾಗುತ್ತದೆ. ಶ್ರೇಣಿ -1ರ ಪರೀಕ್ಷೆಯು ಬಹು ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಇದರಲ್ಲಿ ಪಾಸಾದ ಅಭ್ಯರ್ಥಿಗಳು ಶ್ರೇಣಿ -2ರ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ. ಅಂತಿಮ ಮೆರಿಟ್ ಪಟ್ಟಿಯು ಶ್ರೇಣಿ -2ರ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ತೆಗೆದುಕೊಂಡ ಅಂಕಗಳ ಮೇಲೆ ನಿರ್ಧಾರವಾಗಲಿದೆ. ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ssc.nic.inನಲ್ಲಿ ಮೇ 7ರ ರಾತ್ರಿ 11 ಗಂಟೆವರೆಗೂ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು   

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-04-2024 ರಿಂದ 07-05-2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-05-2024
  • ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ: 08-05-2024
  • ಅರ್ಜಿ ನಮೂನೆ ತಿದ್ದುಪಡಿ: 10-05-2024 ರಿಂದ 11-05-2024 (ರಾತ್ರಿ 11 ಗಂಟೆ)
  • ಟೈರ್-1 (ಕಂಪ್ಯೂಟರ್ ಆಧಾರಿತ) ಪರೀಕ್ಷೆ: 2024ರ ಜುಲೈ 1ರಿಂದ 5, 8ರಿಂದ 12ರವರೆಗೆ
  • ಟೈರ್-2 ಪರೀಕ್ಷೆ: ಅಧಿಸೂಚನೆ ಹೊರಡಿಸಲಾಗುವುದು

ಇದನ್ನೂ ಓದಿ: ಅಭ್ಯರ್ಥಿಯ ಹಠಾತ್ ನಿಧನದಿಂದ ಈ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆ ರದ್ದು..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News