NEET-PG ಪರೀಕ್ಷೆ ಸ್ಥಗಿತಗೊಳ್ಳುವುದಿಲ್ಲ, ಅರ್ಜಿ ವಜಾಗೊಳಿಸಿದ ಸುಪ್ರೀಂ ಹೇಳಿದ್ದೇನು?
NEET PG Exam: ಮೇ 21 ರಂದು ನಡೆಯಬೇಕಿರುವ ಈ ವರ್ಷದ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಬೇಕೆಂಬ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
NEET PG Exam: ಮೇ 21 ರಂದು ನಡೆಯಬೇಕಿರುವ ಈ ವರ್ಷದ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಬೇಕೆಂಬ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ರೀತಿ ಮಾಡುವುದರಿಂದ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಹಿತಾಸಕ್ತಿಗೆ ಧಕ್ಕೆ ಉಂಟಾಗಲಿದೆ ಎಂದು ನ್ಯಾಯಾಲಯ ಹೇಳಿದೆ. 2021ರ ವೈದ್ಯಕೀಯ ಪಿಜಿ ಪ್ರವೇಶ ಪ್ರಕ್ರಿಯೆ ಇನ್ನೂ ನಡೆಯುತ್ತಿರುವ ಕಾರಣ 2022ರ ಪರೀಕ್ಷೆಯನ್ನು ಸ್ವಲ್ಪ ಕಾಲದವರೆಗೆ ಮುಂದೂಡಬೇಕು ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು.
BJP Foundation Day:ಇಂದು ಬಿಜೆಪಿ 42ನೇ ಸಂಸ್ಥಾಪನಾ ದಿನ: ದಿನದ ಪ್ರಾಮುಖ್ಯತೆ ತಿಳಿಸಿದ ಪ್ರಧಾನಿ
ಭಾರತೀಯ ವೈದ್ಯಕೀಯ ಸಂಘ (ಐಎಂಎ) ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯಿಸಿತ್ತು. ನೀಟ್ ಪಿಜಿ 2022 ರ ಪರೀಕ್ಷೆಯನ್ನು ಮುಂದೂಡುವಂತೆ ಐಎಂಎ, ಕೇಂದ್ರ ಆರೋಗ್ಯ ಸಚಿವ ಡಾ ಮನ್ಸುಖ್ ಮಾಂಡವಿಯಾ ಅವರಿಗೆ ಪತ್ರ ಬರೆದಿದೆ. ನೀಟ್ ಪಿಜಿ 2022 ಪರೀಕ್ಷೆ ಮೇ 21 ರಂದು ನಡೆಯಬೇಕಿದೆ.ಕಳೆದ ಹಲವು ದಿನಗಳಿಂದ, NEET PG 2021 ಕೌನ್ಸೆಲಿಂಗ್‌ನಲ್ಲಿ ವಿಳಂಬವಾದ ಕಾರಣ ಪರೀಕ್ಷೆಯನ್ನು ಮುಂದೂಡಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದರು. ಇದಾದ ನಂತರ ಐಎಂಎ ಕೂಡ ಆರೋಗ್ಯ ಸಚಿವರಿಗೆ ಪತ್ರ ಬರೆದು ಪರೀಕ್ಷೆಯ ದಿನಾಂಕವನ್ನು ವಿಸ್ತರಿಸುವ ಬಗ್ಗೆ ಪರಿಗಣಿಸುವಂತೆ ಮನವಿ ಮಾಡಿತ್ತು.
ಇದನ್ನೂ ಓದಿ-ಮೇ 19 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ
ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆ ಮುಂದೂಡುವಂತೆ ಆಗ್ರಹ
ರಾಜ್ಯಗಳಲ್ಲಿನ ಖಾಲಿ ಇರುವ ಸ್ಥಾನಗಳಿಗಾಗಿ ನಡೆಯುತ್ತಿರುವ ಕೌನ್ಸೆಲಿಂಗ್ ಮೇ ಮಧ್ಯದ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಭಾರತೀಯ ವೈದ್ಯಕೀಯ ಸಂಘವು ಪತ್ರದಲ್ಲಿ ತಿಳಿಸಿತ್ತು. ಕರೋನಾ ಮಹಾಮಾರಿಯ ಸಮಯದಲ್ಲಿ ಕರೋನಾ ವಾರಿಯರ್‌ಗಳಾಗಿ ಸೇವೆ ಸಲ್ಲಿಸಿದ ಸುಮಾರು 05 ರಿಂದ 10 ಸಾವಿರ ಇಂಟರ್ನ್‌ಗಳು ತಮ್ಮ ಪರೀಕ್ಷೆಗಳನ್ನು ಪೂರ್ಣಗೊಳಿಸಲು ವಿಳಂಬವಾಗಿರುವುದರಿಂದ ನೀಟ್ ಪಿಜಿಗೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಐಎಂಎ ಪತ್ರದಲ್ಲಿ ಉಲ್ಲೇಖಿಸಿದೆ. ಹೀಗಾಗಿ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ನೀಟ್ ಪಿಜಿ ಪರೀಕ್ಷೆಯನ್ನು ಕೆಲ ದಿನಗಳ ಕಾಲ ಮುಂದೂಡಬೇಕು ಎಂದು ಮನವಿ ಮಾಡಿತ್ತು. ಆದರೆ, ನ್ಯಾಯಾಲಯ ಈ ಬೇಡಿಕೆಯನ್ನು ತಿರಸ್ಕರಿಸಿದೆ. ಈ ರೀತಿ ಮಾಡುವುದರಿಂದ ಈಗಾಗಲೇ ಪರೀಕ್ಷೆಗಾಗಿ ಸಿದ್ಧತೆ ನಡೆಸುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಹಿತಾಸಕ್ತಿಗೆ ಧಕ್ಕೆ ಉಂಟಾಗಲಿದೆ ಎಂದು ನ್ಯಾಯಾಲಯ ಹೇಳಿದೆ.
ಇದನ್ನೂ ನೋಡಿ-
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.