Teachers Recruitment 2023: 13,350 ಪದವೀಧರ ಶಿಕ್ಷಕರ ಹುದ್ದೆಯ ನೇಮಕಾತಿ, ಸರ್ಕಾರದಿಂದ ಸಿಹಿಸುದ್ದಿ

Graduate Teacher Recruitment 2023: ಈ ನೇಮಕಾತಿ ವಿಚಾರದಲ್ಲಿ ಸಣ್ಣ ಕಾನೂನಿನ ತೊಡಕಿದ್ದು, ಅಭ್ಯರ್ಥಿಗಳು ಯಾವುದೇ ರೀತಿ ಭಯಪಡುವ ಅಗತ್ಯವಿಲ್ಲ ಅಂತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

Written by - Puttaraj K Alur | Last Updated : Jul 7, 2023, 04:26 PM IST
  • ಪ್ರಾಥಮಿಕ ಶಾಲೆಗಳಿಗೆ 13,350 ಪದವೀಧರ ಶಿಕ್ಷಕರ ನೇಮಕಾತಿಗೆ ಪ್ರಕ್ರಿಯೆಗಳು ನಡೆಯುತ್ತಿದೆ
  • ಈ ನೇಮಕಾತಿ ವಿಚಾರದಲ್ಲಿ ಸಣ್ಣ ಕಾನೂನಿನ ತೊಡಕಿದ್ದು, ಅಭ್ಯರ್ಥಿಗಳು ಭಯಪಡುವ ಅಗತ್ಯವಿಲ್ಲ
  • ನ್ಯಾಯಾಲಯದ ಆದೇಶ ಬಂದ ಕೂಡಲೇ ನೇಮಕಾತಿ ಪತ್ರ ನೀಡಲಾಗುವುದು ಎಂದ ಮಧು ಬಂಗಾರಪ್ಪ
Teachers Recruitment 2023: 13,350 ಪದವೀಧರ ಶಿಕ್ಷಕರ ಹುದ್ದೆಯ ನೇಮಕಾತಿ, ಸರ್ಕಾರದಿಂದ ಸಿಹಿಸುದ್ದಿ title=
ಪದವೀಧರ ಶಿಕ್ಷಕರ ನೇಮಕಾತಿ

ಬೆಂಗಳೂರು: ಪ್ರಾಥಮಿಕ ಶಾಲೆಗಳಿಗೆ 13,350 ಪದವೀಧರ ಶಿಕ್ಷಕರ ನೇಮಕಾತಿಗೆ ಪ್ರಕ್ರಿಯೆಗಳು ನಡೆಯುತ್ತಿದೆ. ನ್ಯಾಯಾಲಯದ ಆದೇಶ ಬಂದ ಕೂಡಲೇ ನೇಮಕಾತಿ ಪತ್ರಗಳನ್ನು ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಸದಸ್ಯರಾದ ಬಿ.ವೈ.ವಿಜಯೇಂದ್ರ ಮತ್ತು ಮಹೇಶ್ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಅವರು, ಈ ನೇಮಕಾತಿ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿರುವವರ ಜೊತೆ ಸಮಾಲೋಚನೆ ನಡೆಸಲಾಗಿದೆ. ಈ ವಿಚಾರವಾಗಿ ವಕೀಲರ ಜೊತೆ ಸಭೆಗಳನ್ನು ನಡೆಸಿ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Karnataka Budget 2023-24: ಸಿಎಂ ಸಿದ್ದರಾಮಯ್ಯನವರ ದಾಖಲೆಯ 14 ನೇ ಬಜೆಟ್ ಮಂಡನೆ ವೇಳೆ ನೀಡಿದ ಭರವಸೆಗಳೇನು?

ಈ ನೇಮಕಾತಿ ವಿಚಾರದಲ್ಲಿ ಸಣ್ಣ ಕಾನೂನಿನ ತೊಡಕಿದ್ದು, ಅಭ್ಯರ್ಥಿಗಳು ಯಾವುದೇ ರೀತಿ ಭಯಪಡುವ ಅಗತ್ಯವಿಲ್ಲ ಅಂತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ನ್ಯಾಯಾಲಯವು ಯಾವುದೇ ಕಾರಣಕ್ಕೂ ಆದೇಶ ನೀಡಬಾರದು, ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸದೆ ಮುಂದುವರಿಸುವಂತೆ ಸೂಚಿಸಿದೆ. ಇದೇ ತಿಂಗಳ 17ರಂದು ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಆ ವೇಳೆ ಸರಿಯಾದ ವಾದ ಮಂಡಿಸಿ ನೇಮಕಾತಿ ಆದೇಶದ ಅನುಮತಿ ಪಡೆದುಕೊಳ್ಳಲಾಗುವುದು ಅಂತಾ ಮಧು ಬಂಗಾರಪ್ಪ ಹೇಳಿದ್ದಾರೆ.

ಇದನ್ನೂ ಓದಿ: ಪಕ್ಷ ಕೊಟ್ಟ ಭರವಸೆಗಳನ್ನು ಸರ್ಕಾರ ಈಡೇರಿಸಿದೆ-ಎದೆ ಎತ್ತಿ ಉತ್ತರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News