ಕೊಪ್ಪಳ : ತಾಲ್ಲೂಕಿನ ದದೇಗಲ್‌ನ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ ಉದ್ಯಮಶೀಲತೆ, ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ವಿವಿಧ ಅಲ್ಪಾವಧಿ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: NEET-PG ಪರೀಕ್ಷೆ ಸ್ಥಗಿತಗೊಳ್ಳುವುದಿಲ್ಲ, ಅರ್ಜಿ ವಜಾಗೊಳಿಸಿದ ಸುಪ್ರೀಂ ಹೇಳಿದ್ದೇನು?
ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೊಮಾ, ಬಿ.ಇ(ಮೆಕ್ಯಾನಿಕಲ್) ತೇರ್ಗಡೆ ಹೊಂದಿದ ಅಭ್ಯರ್ಥಿಗಳು CNC Milling Machine Operator, CNC Turning Machine Operator, Conventional Milling Machine Operator, Conventional Lathe Machine Operator, CNC Programming & Operation, Production Engineer CAD/CAM 3 ತಿಂಗಳುಗಳ ಅವಧಿಯ ಕೋರ್ಸುಗಳಿಗೆ ಅರ್ಜಿ ಸಲ್ಲಿಸಬಹುದು.Data Entry Operator ಕೋರ್ಸ್ಗೆ ಎಸ್.ಎಸ್.ಎಲ್.ಸಿ, ಪಿ.ಯು.ಸಿ.,ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ:Gyanvapi mosque :ಬಿಗಿ ಭದ್ರತೆಯೊಂದಿಗೆ ನಡೆದ ವಿವಾದಿತ ಜ್ಞಾನವಾಪಿ ಮಸೀದಿ ಸಮೀಕ್ಷೆ
ಆಸಕ್ತ ನಿರುದ್ಯೋಗಿ ಯುವಕ ಮತ್ತು ಯುವತಿಯರು ಮೇ 31 ರೊಳಗಾಗಿ ತರಬೇತಿ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು.ಜೂನ್ ತಿಂಗಳಿನ ಮೊದಲ ವಾರದಲ್ಲಿ ತರಬೇತಿಗಳು ಪ್ರಾರಂಭಗೊಳ್ಳುತ್ತವೆ, ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಯೋಜನೆಯ ಅನುಸಾರ ಪ್ರಮಾಣ ಪತ್ರ ನೀಡಲಾಗುವುದು ಮತ್ತು ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯ ಅಡಿಯಲ್ಲಿ ತರಬೇತಿ ಹೊಂದುವ ಎಸ್.ಸಿ/ ಎಸ್.ಟಿ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ಸಹ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸುರೇಶ್ ರಾಥೋಡ್, ಪ್ರಾಂಶುಪಾಲರು, ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಗದಗ ರೋಡ್, ದದೇಗಲ್, ಕೊಪ್ಪಳ, ಮೊ.ಸಂ: 9902556110/ 8087764454/ 9945846240 ಗೆ ಸಂಪರ್ಕಿಸಬಹುದು ಎಂದು ತರಬೇತಿ ಕೇಂದ್ರದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.