ಡಾ.ರಾಜ್ ಅವರ ಬದುಕಿನಿಂದ ನಾವು ಕಲಿಯಬೇಕಾದ್ದು, ರೂಢಿಸಿಕೊಳ್ಳಬೇಕಾದ್ದು ತುಂಬಾ ಇದೆ: ಸಿಎಂ ಸಿದ್ದರಾಮಯ್ಯ
ಡಾ.ರಾಜ್ ಅವರ ಬದುಕಿನಿಂದ ನಾವು ಕಲಿಯಬೇಕಾದ್ದು, ರೂಢಿಸಿಕೊಳ್ಳಬೇಕಾದ್ದು ತುಂಬಾ ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಬೆಂಗಳೂರು: ಡಾ.ರಾಜ್ ಅವರ ಬದುಕಿನಿಂದ ನಾವು ಕಲಿಯಬೇಕಾದ್ದು, ರೂಢಿಸಿಕೊಳ್ಳಬೇಕಾದ್ದು ತುಂಬಾ ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಅವರು ನಗರದಲ್ಲಿ ಹಮ್ಮಿಕೊಂಡಿದ್ದ 2022ರ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ರಾಜ್ಯದ ಅಭ್ಯರ್ಥಿಗಳ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು, ಮಾತನಾಡುತ್ತಿದ್ದರು.
ಇದನ್ನೂ ಓದಿ: ತಮಿಳು ನಟ ಜಯಂರವಿ ಹೊಸ ಸಿನಿಮಾ ಅನೌನ್ಸ್...'ಇರೈವನ್'ಗೆ ಲೇಡಿ ಸೂಪರ್ ಸ್ಟಾರ್ ನಯನ್ ತಾರಾ ನಾಯಕಿ
ಡಾ.ರಾಜ್ ಕುಮಾರ್ ಅಕಾಡೆಮಿ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 2022ರ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ರಾಜ್ಯದ ಅಭ್ಯರ್ಥಿಗಳ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು, ಮಾತನಾಡಿದೆ.
ನಾನು ರಾಜ್‌ಕುಮಾರ್ ಅವರನ್ನು ಭೇಟಿ ಮಾಡಲು ಹೋದಾಗಲೆಲ್ಲ, "ಬನ್ನಿ, ಬನ್ನಿ ನಮ್ ಕಾಡಿನವರು" ಎಂದು ಖುಷಿಯಿಂದ ಕರೆಯುತ್ತಿದ್ದರು ಎಂದು ಹೇಳಿದರು.
ಡಾ.ರಾಜ್ ಕುಮಾರ್ ಅವರದ್ದು ಅತ್ಯಂತ ಸರಳ ವ್ಯಕ್ತಿತ್ವ . ಪ್ರತಿಯೊಬ್ಬರನ್ನೂ ಗೌರವದಿಂದ ಕಾಣುವ ಮೇರು ಸಂಸ್ಕಾರದ ರಾಯಭಾರಿ ಆಗಿದ್ದವರು. ಡಾ.ರಾಜ್ ಅವರ ಬದುಕಿನಿಂದ ನಾವು ಕಲಿಯಬೇಕಾದ್ದು, ರೂಢಿಸಿಕೊಳ್ಳಬೇಕಾದ್ದು ತುಂಬಾ ಇದೆ. ಡಾ.ರಾಜ್ ಕುಮಾರ್ ಅಕಾಡೆಮಿ ಅಪಾರ ಯಶಸ್ಸು ಗಳಿಸಲು ರಾಘವೇಂದ್ರ ರಾಜ್ ಕುಮಾರ್ ಮತ್ತು ಅಕಾಡೆಮಿ ಸಿಬ್ಬಂದಿಯ ಕೊಡುಗೆ ಅಪಾರ.ಈ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆದು ದೇಶಸೇವೆಯ ಕನಸು ಕಾಣುತ್ತಿರುವ ಅಸಂಖ್ಯ ಮನಸುಗಳಿಗೆ ಆಸರೆಯಾಗಲಿ ಎಂದು ಹಾರೈಸುತ್ತೇನೆ ಎಂದು ಶುಭ ಹಾರಿಸಿದರು.
ಇದನ್ನೂ ಓದಿ: ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ವಿನಯ್ ರಾಜಕುಮಾರ್ ʼಗ್ರಾಮಾಯಣʼ ಆರಂಭ..!
ಜಾತಿ ತಾರತಮ್ಯದ ಕಾರಣದಿಂದ ಶಿಕ್ಷಣದಿಂದ ವಂಚಿತರಾದವರು ಬಹಳಷ್ಟು ಜನರಿದ್ದಾರೆ. ಅವರಿಗೆ ಶಿಕ್ಷಣದ ಜೊತೆಗೆ ಬದುಕಿನ ಅವಕಾಶಗಳೂ ದೊರಕುವುದಿಲ್ಲ. ಯುಪಿಎಸ್‌ಸಿ ನಲ್ಲಿ ತೇರ್ಗಡೆ ಹೊಂದಿದವರು ಈ ಅಸಮಾನತೆ ಮತ್ತು ಜಾತಿ ವ್ಯವಸ್ಥೆಯನ್ನು ಅಳಿಸುವ ಮೂಲಕ ದೇಶದ ಮತ್ತು ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದು ತಿಳಿಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.