UIDAI Recruitment 2024: ಡಿಗ್ರಿ ಪಾಸಾದವರಿಗೆ 2 ಲಕ್ಷಕ್ಕೂ ಅಧಿಕ ಸಂಬಳ, ಇಂದೇ ಅರ್ಜಿ ಸಲ್ಲಿಸಿರಿ

UIDAI Recruitment 2024: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

Written by - Puttaraj K Alur | Last Updated : Jul 8, 2024, 12:02 PM IST
  • ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ
  • ಒಟ್ಟು 5 ಡೆಪ್ಯುಟಿ ಡೈರೆಕ್ಟರ್ & ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು ಖಾಲಿ ಇವೆ
  • ಲಿಖಿತ ಪರೀಕ್ಷೆ & ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
UIDAI Recruitment 2024: ಡಿಗ್ರಿ ಪಾಸಾದವರಿಗೆ 2 ಲಕ್ಷಕ್ಕೂ ಅಧಿಕ ಸಂಬಳ, ಇಂದೇ ಅರ್ಜಿ ಸಲ್ಲಿಸಿರಿ  title=
UIDAI Recruitment 2024

UIDAI Recruitment 2024: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 5 ಡೆಪ್ಯುಟಿ ಡೈರೆಕ್ಟರ್ & ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 

ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ಇದನ್ನೂ ಓದಿ: Daily GK Quiz: ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ದೇಶ ಯಾವುದು?

ಹುದ್ದೆಯ ಮಾಹಿತಿ: ಈ ನೇಮಕಾತಿಯಡಿ ಡೆಪ್ಯುಟಿ ಡೈರೆಕ್ಟರ್- 3 ಮತ್ತು ಅಸಿಸ್ಟೆಂಟ್ ಡೈರೆಕ್ಟರ್- 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಶೈಕ್ಷಣಿಕ ಅರ್ಹತೆ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು 2024ರ ಸೆಪ್ಟೆಂಬರ್ 2ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ & ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

ಉದ್ಯೋಗದ ಸ್ಥಳ: ಬೆಂಗಳೂರು

ವೇತನ: ಡೆಪ್ಯುಟಿ ಡೈರೆಕ್ಟರ್‌ಗೆ ಮಾಸಿಕ ₹67,700- 2,08,700 ಮತ್ತು ಅಸಿಸ್ಟೆಂಟ್ ಡೈರೆಕ್ಟರ್‌ಗೆ ಮಾಸಿಕ ₹56,100-1,77,500 ವೇತನ ನೀಡಲಾಗುತ್ತಿತ್ತು.

ಇದನ್ನೂ ಓದಿ: Daily GK Quiz: ಭಾರತೀಯ ಸಂವಿಧಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ?

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ. ನಿರ್ದೇಶಕರು (HR), ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI), ಆಧಾರ್ ಕಾಂಪ್ಲೆಕ್ಸ್, NTI ಲೇಔಟ್, ಟಾಟಾ ನಗರ, ಕೊಡಿಗೇಹಳ್ಳಿ, ತಂತ್ರಜ್ಞಾನ ಕೇಂದ್ರ ಬೆಂಗಳೂರು - 560092 ಈ ವಿಳಾಸಕ್ಕೆ ಕಳುಹಿಸಬೇಕು ಅಥವಾ ಅರ್ಜಿಗಳ ಸಾಫ್ಟ್ ಕಾಪಿಯನ್ನು ಇ-ಮೇಲ್ ಐಡಿ deputation@uidai.net.in ಗೆ ಕಳುಹಿಸಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News