UPSC CAPF Recruitment 2024: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್(UPSC)ನಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಡಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಖಾಲಿಯಿರುವ ಅಸಿಸ್ಟಂಟ್ ಕಮಾಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಬಾರ್ಡರ್ ಸೆಕ್ಯುರಿಟಿ ಫೋರ್ಸ್, ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್, ಸೆಂಟ್ರಲ್ ಇಂಡಸ್ಟ್ರೀಯಲ್ ಸೆಕ್ಯುರಿಟಿ ಫೋರ್ಸ್, ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಮತ್ತು ಸಶಸ್ತ್ರ ಸೀಮಾ ಬಲಗಳಲ್ಲಿ 506 ಹುದ್ದೆಗಳಿವೆ. ಮೇ 14 ಕೊನೆಯ ದಿನವಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಸ್ಥಾನವನ್ನು ಬಳಸಿಕೊಂಡು ನಿಮ್ಮ ಮುಂದೆ ಮೂರ್ಖ ಮಾತುಗಳನ್ನು ಹೇಳುತ್ತಿದ್ದಾರೆ ಪ್ರಧಾನಿ : ಪ್ರಿಯಾಂಕಾ ಗಾಂಧಿ
ಹುದ್ದೆಗಳ ವಿವರ: 186 ಗಡಿ ಭದ್ರತಾ ಪಡೆ, 120 ಕೇಂದ್ರ ಮೀಸಲು ಪೊಲೀಸ್ ಪಡೆ, 100 ಕೇಂದ್ರ ಕೈಗಾರಿಕಾ ಭದ್ರತಾ ಪಡೆ, 58 ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಮತ್ತು 42 ಸಶಸ್ತ್ರ ಸೀಮಾ ಬಲ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಕೆಯ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ.
ವಯೋಮಿತಿ: ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯವಿರುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, SC/ST, ಕೇಂದ್ರ ಸರ್ಕಾರಿ ನೌಕರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ ಅಥವಾ ದೈಹಿಕ ಮಾಪನ ಪರೀಕ್ಷೆ & ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಆಗಸ್ಟ್ 4ರಂದು ನಡೆಯಲಿದ್ದು, ಕರ್ನಾಟಕದ ಅಭ್ಯರ್ಥಿಗಳು ಬೆಂಗಳೂರು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು.
ಅರ್ಜಿ ಶುಲ್ಕ: ಮಹಿಳಾ/SC/ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಇನ್ನುಳಿದ ಎಲ್ಲಾ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
- ಅಭ್ಯರ್ಥಿಗಳು ಮೊದಲು UPSCಯ ಅಧಿಕೃತ ವೆಬ್‌ಸೈಟ್ https://upsc.gov.in/ ಗೆ ಹೋಗಿ.
- Registration ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೆಸರು ನೋಂದಾಯಿಸಿ. ಇದಕ್ಕಾಗಿ ನಿಮ್ಮ ಮೊಬೈಲ್ ನಂಬರ್, ಇ-ಮೇಲ್ ಐಡಿ ನಮೂದಿಸಿ.
- ಹೆಸರು ನೋಂದಾಯಿಸಿಕೊಂಡ ಬಳಿಕ ರಿಜಿಸ್ಟ್ರೇಷನ್ ನಂಬರ್ ಮತ್ತು ಪಾಸ್‌ವರ್ಡ್ ಬಳಿಸಿ ಲಾಗಿನ್ ಆಗಿ.
- ವಿವರಗಳನ್ನು ನೀಡಿ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ದಾಖಲೆಗಳು, ಸಹಿ ಮತ್ತು ಫೋಟೊವನ್ನು ನಿಗದಿತ ಅಳತೆಯಲ್ಲಿ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
- ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ ಅಪ್ಲಿಕೇಷನ್ ಫಾರಂ ಸಲ್ಲಿಸಿ.
- ನಂತರ ಅಪ್ಲಿಕೇಷನ್ ಫಾರಂನ ಪ್ರಿಂಟ್ ಔಟ್ ತೆಗೆದುಕೊಳ್ಳಿರಿ.
ಇದನ್ನೂ ಓದಿ: ಕಾಶ್ಮೀರ ಕಣಿವೆಯಲ್ಲಿ ಭಾರೀ ಹಿಮಪಾತ, ಹೈ ಅಲರ್ಟ್ ಜಾರಿ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.