UPSC CAPF Recruitment 2024: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌(UPSC)ನಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಡಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಖಾಲಿಯಿರುವ ಅಸಿಸ್ಟಂಟ್‌ ಕಮಾಂಡೆಂಟ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. 


COMMERCIAL BREAK
SCROLL TO CONTINUE READING

ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌, ಸೆಂಟ್ರಲ್‌ ರಿಸರ್ವ್‌ ಪೊಲೀಸ್‌ ಫೋರ್ಸ್‌, ಸೆಂಟ್ರಲ್‌ ಇಂಡಸ್ಟ್ರೀಯಲ್‌ ಸೆಕ್ಯುರಿಟಿ ಫೋರ್ಸ್‌, ಇಂಡೋ-ಟಿಬೆಟಿಯನ್ ಬಾರ್ಡರ್‌ ಪೋಲೀಸ್‌ ಮತ್ತು ಸಶಸ್ತ್ರ ಸೀಮಾ ಬಲಗಳಲ್ಲಿ 506 ಹುದ್ದೆಗಳಿವೆ. ಮೇ 14 ಕೊನೆಯ ದಿನವಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: ಸ್ಥಾನವನ್ನು ಬಳಸಿಕೊಂಡು ನಿಮ್ಮ ಮುಂದೆ ಮೂರ್ಖ ಮಾತುಗಳನ್ನು ಹೇಳುತ್ತಿದ್ದಾರೆ ಪ್ರಧಾನಿ : ಪ್ರಿಯಾಂಕಾ ಗಾಂಧಿ


ಹುದ್ದೆಗಳ ವಿವರ: 186 ಗಡಿ ಭದ್ರತಾ ಪಡೆ, 120 ಕೇಂದ್ರ ಮೀಸಲು ಪೊಲೀಸ್ ಪಡೆ, 100 ಕೇಂದ್ರ ಕೈಗಾರಿಕಾ ಭದ್ರತಾ ಪಡೆ, 58 ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಮತ್ತು 42 ಸಶಸ್ತ್ರ ಸೀಮಾ ಬಲ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ. 


ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಕೆಯ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. 


ವಯೋಮಿತಿ: ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯವಿರುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, SC/ST, ಕೇಂದ್ರ ಸರ್ಕಾರಿ ನೌಕರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.


ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ ಅಥವಾ ದೈಹಿಕ ಮಾಪನ ಪರೀಕ್ಷೆ & ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಆಗಸ್ಟ್‌ 4ರಂದು ನಡೆಯಲಿದ್ದು, ಕರ್ನಾಟಕದ ಅಭ್ಯರ್ಥಿಗಳು ಬೆಂಗಳೂರು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು.


ಅರ್ಜಿ ಶುಲ್ಕ: ಮಹಿಳಾ/SC/ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಇನ್ನುಳಿದ ಎಲ್ಲಾ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. 


ಅರ್ಜಿ ಸಲ್ಲಿಸುವುದು ಹೇಗೆ?


  • ಅಭ್ಯರ್ಥಿಗಳು ಮೊದಲು UPSCಯ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ.

  • Registration ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ. ಇದಕ್ಕಾಗಿ ನಿಮ್ಮ ಮೊಬೈಲ್‌ ನಂಬರ್‌, ಇ-ಮೇಲ್‌ ಐಡಿ ನಮೂದಿಸಿ.

  • ಹೆಸರು ನೋಂದಾಯಿಸಿಕೊಂಡ ಬಳಿಕ ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಿಸಿ ಲಾಗಿನ್‌ ಆಗಿ.

  • ವಿವರಗಳನ್ನು ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.

  • ಅಗತ್ಯ ದಾಖಲೆಗಳು, ಸಹಿ ಮತ್ತು ಫೋಟೊವನ್ನು ನಿಗದಿತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.

  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.

  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ ಅಪ್ಲಿಕೇಷನ್‌ ಫಾರಂ ಸಲ್ಲಿಸಿ.

  • ನಂತರ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿರಿ.


ಇದನ್ನೂ ಓದಿ: ಕಾಶ್ಮೀರ ಕಣಿವೆಯಲ್ಲಿ ಭಾರೀ ಹಿಮಪಾತ, ಹೈ ಅಲರ್ಟ್ ಜಾರಿ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.