ಪ್ರಿಲಿಮಿನರಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಿಶೇಷ ಸೂಚನೆ ನೀಡಿದ ಯುಪಿ‌ಎಸ್‌ಸಿ

UPSC Prelims Exam: ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ (ಪ್ರಿಲಿಮಿನರಿ) ಪರೀಕ್ಷೆ 2024ಕ್ಕೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಯುಪಿಎಸ್‌ಸಿ ವಿಶೇಷ ಸೂಚನೆಯನ್ನು ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. 

Written by - Yashaswini V | Last Updated : Jun 10, 2024, 11:04 AM IST
  • ಜೂನ್ 16, 2024 ರಂದು ದೇಶಾದ್ಯಂತ ನಾಗರಿಕ ಸೇವೆಗಳ ಪ್ರಿಲಿಮ್ಸ್ 2024 ಪರೀಕ್ಷೆ ನಡೆಯಲಿದೆ.
  • ಈ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಯುಪಿಎಸ್‌ಸಿ ನೀಡಿರುವ ಮಾರ್ಗಸೂಚಿಗಳನ್ನು ಅನುಸರಿಸಬೇಕು
  • ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ (ಪ್ರಿಲಿಮಿನರಿ) ಪರೀಕ್ಷೆ 2024 ಕ್ಕೆ ಹಾಜರಾಗುವ ಅಭ್ಯರ್ಥಿಗಳು ಅನುಸರಿಸಬೇಕಾದ ಸೂಚನೆಗಳೆಂದರೆ...
ಪ್ರಿಲಿಮಿನರಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಿಶೇಷ ಸೂಚನೆ ನೀಡಿದ ಯುಪಿ‌ಎಸ್‌ಸಿ title=

UPSC Prelims Civil Services 2024: ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ (ಪ್ರಿಲಿಮಿನರಿ) ಪರೀಕ್ಷೆಗೆ ಸಂಬಂಧಿಸಿದಂತೆ ರಾಷ್ಟ್ರದಾದ್ಯಂತ ವಿವಿಧ ಸ್ಥಳಗಳಲ್ಲಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಯುಪಿಎಸ್‌ಸಿ ಕೆಲವು ಸೂಚನೆಗಳನ್ನು ನೀಡಿದೆ. ಪರೀಕ್ಷಾರ್ಥಿಗಳು ಈ ಸೂಚನೆಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ. 

ವಾಸ್ತವವಾಗಿ, ಜೂನ್ 16, 2024 ರಂದು ದೇಶಾದ್ಯಂತ ನಾಗರಿಕ ಸೇವೆಗಳ ಪ್ರಿಲಿಮ್ಸ್ 2024 ಪರೀಕ್ಷೆ (Civil Services Prelims 2024 Exam) ನಡೆಯಲಿದೆ. ಈ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಯುಪಿಎಸ್‌ಸಿ ನೀಡಿರುವ ಮಾರ್ಗಸೂಚಿಗಳನ್ನು ಅನುಸರಿಸಬೇಕಾಗಿದ್ದು, ಆ ಸೂಚನೆಗಳೇನು ಎಂಬ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ. 

ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ (ಪ್ರಿಲಿಮಿನರಿ) ಪರೀಕ್ಷೆ 2024 ಕ್ಕೆ ಹಾಜರಾಗುವ ಅಭ್ಯರ್ಥಿಗಳು ಅನುಸರಿಸಬೇಕಾದ ಸೂಚನೆಗಳೆಂದರೆ... 
*  ಇ-ಅಡ್ಮಿಟ್ ಕಾರ್ಡ್‌ನ ಪ್ರಿಂಟ್‌ಔಟ್: 

ನೀವು ಯುಪಿಎಸ್‌ಸಿ ಪರೀಕ್ಷೆ ತೆಗೆದುಕೊಂಡಿದ್ದರೆ ಅಂತಹ ಅಭ್ಯರ್ಥಿಗಳು ತಮ್ಮ  ಇ-ಅಡ್ಮಿಟ್ ಕಾರ್ಡ್‌ನ (E-Admit Card) ಪ್ರಿಂಟ್‌ಔಟ್ ಅನ್ನು ತೆಗೆದುಕೊಂಡು ನಿಗದಿಪಡಿಸಲಾಗಿರುವ ಪರೀಕ್ಷಾ ಕೇಂದ್ರದಲ್ಲಿ ತೋರಿಸಬೇಕು. ಇಲ್ಲದಿದ್ದರೆ, ಪರೀಕ್ಷೆಗೆ ಕೂರಿಸಲಾಗುವುದಿಲ್ಲ. 

ಇದನ್ನೂ ಓದಿ- CBSE Supplementary Exam 2024: ಸಿಬಿಎಸ್‌ಸಿ 10 ನೇ ತರಗತಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಇಲ್ಲಿದೆ

* ಫೋಟೋ ಐಡಿ ಕಾರ್ಡ್: 
ಯುಪಿಎಸ್‌ಸಿ ಪರೀಕ್ಷೆಗೆ (UPSC Exam) ಹಾಜರಾಗುವ ಅಭ್ಯರ್ಥಿಗಳು ಪರೀಕ್ಷೆಯ ಪ್ರತಿ ಸೆಷನ್‌ನಲ್ಲಿ ಹಾಜರಾಗುವಾಗ  ಇ-ಅಡ್ಮಿಟ್ ಕಾರ್ಡ್‌ನಲ್ಲಿ ನಮೂದಿಸಲಾದ ಫೋಟೋ ಐಡಿ ಕಾರ್ಡ್ ಅನ್ನು ತೋರಿಸಬೇಕು. 

* ಪಾಸ್‌ಪೋರ್ಟ್ ಗಾತ್ರದ ಛಾಯಾಚಿತ್ರ: 
ಒಂದೊಮ್ಮೆ ಅಭ್ಯರ್ಥಿಯ ಇ-ಅಡ್ಮಿಟ್ ಕಾರ್ಡ್‌ನಲ್ಲಿ ನಿಮ್ಮ ಛಾಯಾಚಿತ್ರ ಸ್ಪಷ್ಟವಾಗಿಲ್ಲ ಎಂದಾದರೆ ಅಂತಹವರು ಪರೀಕ್ಷೆಗೆ ತೆರಳುವಾಗ ಎರಡು ಪಾಸ್‌ಪೋರ್ಟ್ ಗಾತ್ರದ ಛಾಯಾಚಿತ್ರಗಳೊಂದಿಗೆ ಫೋಟೋ ಗುರುತಿನ ಚೀಟಿಯನ್ನು ಕೊಂಡೊಯ್ಯುವುದನ್ನು ಮರೆಯಬೇಡಿ. 

* ಇಮೇಲ್: 
ಒಂದೊಮ್ಮೆ ಇ-ಅಡ್ಮಿಟ್ ಕಾರ್ಡ್‌ನಲ್ಲಿ ಯಾವುದೇ ತಪ್ಪಾದ ಮಾಹಿತಿ ನಮೂದಾಗಿದ್ದರೆ ಅಂತಹವರು ತಕ್ಷಣವೇ ಇಮೇಲ್ ಮೂಲಕ (ಇಮೇಲ್ ಐಡಿ uscsp-upsc@nic.in ನಲ್ಲಿ) ಆಯೋಗಕ್ಕೆ ಮಾಹಿತಿ ನೀಡಬೇಕು. 

* ಅರ್ಧಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ಹಾಜರಿ: 
ಯುಪಿಎಸ್‌ಸಿ ಪರೀಕ್ಷೆ ತೆಗೆದುಕೊಂಡಿರುವ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೂ ಅರ್ಧಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು. ನಿಗದಿತ ತಮಕ್ಕಿಂತ ತಡವಾಗಿ ಬರುವ ಅಭ್ಯರ್ಥಿಗಳನ್ನು ಪರೀಕ್ಷಾ ಸ್ಥಳಕ್ಕೆ ಪ್ರವೇಶಿಸಲು ಅನುಮತಿಸುವುದಿಲ್ಲ. 

ಇದನ್ನೂ ಓದಿ- JEE Advanced Result 2024: ಜೆಇಇ ಅಡ್ವಾನ್ಸ್ಡ್‌ ಫಲಿತಾಂಶ ರಿಲೀಸ್‌... ರಿಸಲ್ಟ್‌ ಚೆಕ್‌ ಮಾಡುವ ನೇರ ಲಿಂಕ್‌ ಮತ್ತು ವಿಧಾನ ಇಲ್ಲಿದೆ

* ಈ ವಸ್ತುಗಳನ್ನು ಪರೀಕ್ಷಾ ಸ್ಥಳಕ್ಕೆ ಕೊಂಡೊಯ್ಯುವಂತಿಲ್ಲ: 
ಯುಪಿಎಸ್‌ಸಿ ಸೂಚನೆಗಳ ಪ್ರಕಾರ, ಅಭ್ಯರ್ಥಿಗಳು ಯಾವುದೇ ಯಾವುದೇ ಬೆಲೆಬಾಳುವ ವಸ್ತುಗಳು, ಮೊಬೈಲ್ ಫೋನ್‌ಗಳು, ಸ್ಮಾರ್ಟ್/ಡಿಜಿಟಲ್ ವಾಚ್‌ಗಳು, ಇತರ ಐಟಿ ಗ್ಯಾಜೆಟ್‌ಗಳು, ಪುಸ್ತಕಗಳು, ಬ್ಯಾಗ್‌ಗಳು ಇತ್ಯಾದಿಗಳೊಂದಿಗೆ ಪರೀಕ್ಷಾ ಆವರಣವನ್ನು  ಪ್ರವೇಶಿಸಲು ಅನುಮತಿ ಇರುವುದಿಲ್ಲ. ಹಾಗಾಗಿ ಈ ನಿಷೇಧಿತ ವಸ್ತುಗಳನ್ನು ತರದಂತೆ ಅಭ್ಯಾರ್ಟಿಗಳಿಗೆ ಸೂಚಿಸಲಾಗಿದೆ. 

* ಕಪ್ಪು ಪೆನ್: 
ಅಭ್ಯರ್ಥಿಗಳು ಪರೀಕ್ಷೆ ಬರೆಯಲು  ಕಪ್ಪು ಬಾಲ್ ಪಾಯಿಂಟ್ ಪೆನ್ ಅನ್ನು ತರಲು ಸೂಚಿಸಲಾಗಿದೆ. 

* ಸಾಮಾನ್ಯ ಕೈಗಡಿಯಾರ: 
ಅಭ್ಯರ್ಥಿಗಳಿಗೆ ಸಾಮಾನ್ಯ ಕೈಗಡಿಯಾಗಳನ್ನು ಧರಿಸಿ ಪರೀಕ್ಷಾ ಕೊಠಡಿಗಳು/ಹಾಲ್‌ಗಳ ಒಳಗೆ ಪ್ರವೇಶಿಸಲು ಅನುಮತಿ ನೀಡಲಾಗಿದೆ. 

* ಹೆಸರು ಬದಲಾವಣೆ: 
ಒಂದೊಮ್ಮೆ ಮೆಟ್ರಿಕ್ಯುಲೇಷನ್ ನಂತರ ಕಾನೂನು ಪ್ರಕ್ರಿಯೆಯಲ್ಲಿ ನಿಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದರೆ ಅಂತಹ ಅಭ್ಯರ್ಥಿಗಳು ಯುಪಿಎಸ್‌ಸಿ ಪರೀಕ್ಷೆಯ ಪ್ರತಿ  ಸೆಷನ್‌ಗೆ ಇ-ಅಡ್ಮಿಟ್ ಕಾರ್ಡ್, ಸರ್ಕಾರ ನೀಡಿದ ಫೋಟೋ ಗುರುತಿನ ಚೀಟಿ ಮತ್ತು/ಅಥವಾ ಬದಲಾದ ಹೆಸರಿನ ಮೂಲ ಗೆಜೆಟ್ ಅಧಿಸೂಚನೆಯನ್ನು ಕೊಂಡೊಯ್ಯುವುದು ಕಡ್ಡಾಯವಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News