UPSC Recruitment 2024: 2,253 ಹುದ್ದೆಗೆ ಅರ್ಜಿ ಆಹ್ವಾನ, ಡಿಗ್ರಿ ಪಾಸಾದವರು ಇಂದೇ ಅರ್ಜಿ ಸಲ್ಲಿಸಿ

UPSC Recruitment 2024: ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿಯಿರುವ 323 ಪರ್ಸನಲ್ ಅಸಿಸ್ಟೆಂಟ್ ಮತ್ತು 1,930 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ​

Written by - Puttaraj K Alur | Last Updated : Mar 23, 2024, 07:52 PM IST
  • ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ
  • 2,253 ಪರ್ಸನಲ್ ಅಸಿಸ್ಟೆಂಟ್ & ನರ್ಸಿಂಗ್ ಆಫೀಸರ್ ಹುದ್ದೆಗಳು ಖಾಲಿ
  • ಡಿಪ್ಲೊಮಾ, ಪದವಿ, ಬಿ.ಎಸ್ಸಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
UPSC Recruitment 2024: 2,253 ಹುದ್ದೆಗೆ ಅರ್ಜಿ ಆಹ್ವಾನ, ಡಿಗ್ರಿ ಪಾಸಾದವರು ಇಂದೇ ಅರ್ಜಿ ಸಲ್ಲಿಸಿ title=
UPSC Recruitment 2024

UPSC Recruitment 2024: ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 2,253 ಪರ್ಸನಲ್ ಅಸಿಸ್ಟೆಂಟ್, ನರ್ಸಿಂಗ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದೇ ಮಾರ್ಚ್​ 27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತು ತಿಳಿಯುವುದು ಮುಖ್ಯ. ಈ ಎಲ್ಲದರ ಮಾಹಿತಿ ಇಲ್ಲಿದೆ ನೋಡಿ.  

ಇದನ್ನೂ ಓದಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅರೆಸ್ಟ್ ; ಮದ್ಯ ಹಗರಣ ಕೇಸ್ ಟೈಮ್ ಲೈನ್ ಇಲ್ಲಿದೆ

ಹುದ್ದೆಯ ವಿವರ: ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿಯಿರುವ 323 ಪರ್ಸನಲ್ ಅಸಿಸ್ಟೆಂಟ್ ಮತ್ತು 1,930 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  

ವಿದ್ಯಾರ್ಹತೆ: ನರ್ಸಿಂಗ್ ಆಫೀಸರ್‌ಗೆ ಡಿಪ್ಲೊಮಾ, ಬಿ.ಎಸ್ಸಿ ಮತ್ತು ಪರ್ಸನಲ್ ಅಸಿಸ್ಟೆಂಟ್‌ಗೆ ಪದವಿ ಪೂರ್ಣಗೊಳಿಸಿರಬೇಕು. 

ವಯೋಮಿತಿ: ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ: OBC ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ, PwBD (UR) ಅಭ್ಯರ್ಥಿಗಳಿಗೆ 10 ವರ್ಷ, PwBD (OBC) ಅಭ್ಯರ್ಥಿಗಳಿಗೆ 10 ವರ್ಷ ಮತ್ತು PwBD (SC/ST) ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ. 

ಅರ್ಜಿ ಶುಲ್ಕ: SC/ST/PWD/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ. ಇತರ ಎಲ್ಲಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 25 ರೂ. ಪಾವತಿಸಬೇಕು.

ಉದ್ಯೋಗದ ಸ್ಥಳ: ಕರ್ನಾಟಕ ಸೇರಿದಂತೆ ಭಾರತದಾದ್ಯಂತ

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸ್ಕಿಲ್ ಟೆಸ್ಟ್​ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. 

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು UPSCಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.  

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಮಾರ್ಚ್ 7, ಅರ್ಜಿ ಸಲ್ಲಿಸಲು ಕೊನೆಯ ದಿನ ಮಾರ್ಚ್ 27 ಮತ್ತು ಅರ್ಜಿ ನಮೂನೆ ಕರೆಕ್ಷನ್​ ಮಾಡುವ ದಿನಾಂಕ: 28ನೇ ಮಾರ್ಚ್ 2024ರಿಂದ 3ನೇ ಏಪ್ರಿಲ್ 2024

ಇದನ್ನೂ ಓದಿ: Special Train : ಮಂಗಳೂರಿನಿಂದ ನವದೆಹಲಿಗೆ ವಿಶೇಷ ರೈಲು ಸೇವೆ-ಸಮಯ, ಟಿಕೆಟ್‌ ದರಗಳ ವಿವರ ಇಲ್ಲಿದೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News